ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ

ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂ ತಲಾ ಒಂದು ಲಕ್ಷ ಪರಿಹಾರ ಚೆಕ್​ನ್ನು ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ನೀಡಿದ್ದಾರೆ.

ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ
ಚೆಕ್​ ವಿತರಣೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 18, 2023 | 11:10 AM

ದಾವಣಗೆರೆ: ಜಗಳೂರು(Jagaluru)ತಾಲೂಕಿನ ಬಸವನ‌ಕೋಟೆ ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸತ್ಯಪ್ಪ(45), ಮೈಲಪ್ಪ(49) ಎಂಬ ಇಬ್ಬರು ಕಾರ್ಮಿಕರರು(Workers) ಸಾವನ್ನಪ್ಪಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಇದೀಗ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ತಲಾ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ ಮಾಡಲಾಗಿದೆ. ಹೌದು ಮೃತರ ಮನೆಗಳಿಗೆ ತೆರಳಿದ ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ಇದೀಗ ಪರಿಹಾರದ ಚೆಕ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಈಗಾಗಲೇ ಗ್ರಾಮ ಪಂ‌ಚಾಯತಿಯಿಂದ ಮೃತರ ಕುಟುಂಬಗಳಿಗೆ ಸಹಾಯ ನೀಡಲಾಗಿದೆ. ಬರುವ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಆ ಕುಟುಂಬಗಳಿಗೆ ಕಲ್ಪಿಸುವುದಾಗಿ ಶಾಸಕ ದೇವೇಂದ್ರಪ್ಪ ಭರವಸೆ ನೀಡಿದ್ದಾರೆ.

ಘಟನೆ ವಿವರ

ಮಾರ್ಚ್​ 21ರಂದು ಮೃತ ಪೌರ ಕಾರ್ಮಿಕರಿಗೆ ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತಿ ಪಿಡಿಒ ಶಶಿಧರ್‌ ಪಾಟೀಲ್ ಎಂಬುವವರು ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಅದರಂತೆ ಹಲವು ದಿನಗಳಿಂದ ತುಂಬಿದ್ದ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಕಾರ್ಮಿಕರು ಮುಂದಾಗಿದ್ದರು. ಹೀಗೆ ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾಗಿದ್ದು, ಕೂಡಲೇ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು‌ ಪೌರಕಾರ್ಮಿಕರು ಸಾವನ್ನಪ್ಪಿದ್ದರು. ಇಬ್ಬರ ಕುಟುಂಬಗಳು ಅನಾಥವಾಗಿತ್ತು

ಇದನ್ನೂ ಓದಿ:ದಾವಣಗೆರೆ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕ ಸಾವು

ಈ ರ್ದುಘಟನೆಯಿಂದ ಮನೆಯವರು ಆಘಾತಕ್ಕೀಡಾಗಿದ್ದರು. ಅಧಿಕಾರಿಗಳು ಹೇಳಿದ್ದ ಕೆಲಸ ಮಾಡಲು ಹೋಗಿ ಅಮಾಯಕ ಎರಡು ಜೀವ ಬಲಿಯಾಗಿತ್ತು. ಹಲವು ದಿನಗಳಿಂದ ಚರಂಡಿಯಲ್ಲಿ ಸರಾಗವಾಗಿ ನೀರು ಮುಂದೆ ಹರಿದುಹೋಗದ ಕಾರಣ ಅಪಾರ ಪ್ರಮಾಣದ ತ್ಯಾಜ್ಯ ಕಟ್ಟಿಕೊಂಡು ಕೊಳೆತಿದ್ದು, ಇದರಿಂದ ವಿಷಕಾರಿ ರಾಸಾಯನಿಕ ಉತ್ಪತ್ತಿಯಾಗಿತ್ತು. ತೆರೆದ ಚರಂಡಿಯಲ್ಲಿ ಇಳಿದಿದ್ದ ಕಾರ್ಮಿಕರು ತಾಸುಗಟ್ಟಲೆ ಬಗ್ಗಿ ತ್ಯಾಜ್ಯ ಹೊರ ತೆಗೆಯುವ ಸಮಯದಲ್ಲಿ ವಿಷ ಗಾಳಿ ಸೇವಿಸಿದ ಇಬ್ಬರೂ ಅಸ್ವಸ್ಥರಾಗಿ, ಸಾವನ್ನಪ್ಪಿದ್ದರು. ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 18 July 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್