ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ

ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂ ತಲಾ ಒಂದು ಲಕ್ಷ ಪರಿಹಾರ ಚೆಕ್​ನ್ನು ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ನೀಡಿದ್ದಾರೆ.

ಚರಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರು ಸಾವು: ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಿ‌.ದೇವೇಂದ್ರಪ್ಪ
ಚೆಕ್​ ವಿತರಣೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2023 | 11:10 AM

ದಾವಣಗೆರೆ: ಜಗಳೂರು(Jagaluru)ತಾಲೂಕಿನ ಬಸವನ‌ಕೋಟೆ ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚರಂಡಿ ಸ್ವಚ್ಚಗೊಳಿಸುವಾಗ ವಿಷಗಾಳಿ ಸೇವಿಸಿ ಸತ್ಯಪ್ಪ(45), ಮೈಲಪ್ಪ(49) ಎಂಬ ಇಬ್ಬರು ಕಾರ್ಮಿಕರರು(Workers) ಸಾವನ್ನಪ್ಪಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಇದೀಗ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ತಲಾ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ ಮಾಡಲಾಗಿದೆ. ಹೌದು ಮೃತರ ಮನೆಗಳಿಗೆ ತೆರಳಿದ ಜಗಳೂರು ಶಾಸಕ ಬಿ‌.ದೇವೇಂದ್ರಪ್ಪ ಅವರು ಇದೀಗ ಪರಿಹಾರದ ಚೆಕ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಈಗಾಗಲೇ ಗ್ರಾಮ ಪಂ‌ಚಾಯತಿಯಿಂದ ಮೃತರ ಕುಟುಂಬಗಳಿಗೆ ಸಹಾಯ ನೀಡಲಾಗಿದೆ. ಬರುವ ದಿನಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಆ ಕುಟುಂಬಗಳಿಗೆ ಕಲ್ಪಿಸುವುದಾಗಿ ಶಾಸಕ ದೇವೇಂದ್ರಪ್ಪ ಭರವಸೆ ನೀಡಿದ್ದಾರೆ.

ಘಟನೆ ವಿವರ

ಮಾರ್ಚ್​ 21ರಂದು ಮೃತ ಪೌರ ಕಾರ್ಮಿಕರಿಗೆ ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತಿ ಪಿಡಿಒ ಶಶಿಧರ್‌ ಪಾಟೀಲ್ ಎಂಬುವವರು ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಅದರಂತೆ ಹಲವು ದಿನಗಳಿಂದ ತುಂಬಿದ್ದ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಕಾರ್ಮಿಕರು ಮುಂದಾಗಿದ್ದರು. ಹೀಗೆ ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾಗಿದ್ದು, ಕೂಡಲೇ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು‌ ಪೌರಕಾರ್ಮಿಕರು ಸಾವನ್ನಪ್ಪಿದ್ದರು.
ಇಬ್ಬರ ಕುಟುಂಬಗಳು ಅನಾಥವಾಗಿತ್ತು

ಇದನ್ನೂ ಓದಿ:ದಾವಣಗೆರೆ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕ ಸಾವು

ಈ ರ್ದುಘಟನೆಯಿಂದ ಮನೆಯವರು ಆಘಾತಕ್ಕೀಡಾಗಿದ್ದರು. ಅಧಿಕಾರಿಗಳು ಹೇಳಿದ್ದ ಕೆಲಸ ಮಾಡಲು ಹೋಗಿ ಅಮಾಯಕ ಎರಡು ಜೀವ ಬಲಿಯಾಗಿತ್ತು. ಹಲವು ದಿನಗಳಿಂದ ಚರಂಡಿಯಲ್ಲಿ ಸರಾಗವಾಗಿ ನೀರು ಮುಂದೆ ಹರಿದುಹೋಗದ ಕಾರಣ ಅಪಾರ ಪ್ರಮಾಣದ ತ್ಯಾಜ್ಯ ಕಟ್ಟಿಕೊಂಡು ಕೊಳೆತಿದ್ದು, ಇದರಿಂದ ವಿಷಕಾರಿ ರಾಸಾಯನಿಕ ಉತ್ಪತ್ತಿಯಾಗಿತ್ತು. ತೆರೆದ ಚರಂಡಿಯಲ್ಲಿ ಇಳಿದಿದ್ದ ಕಾರ್ಮಿಕರು ತಾಸುಗಟ್ಟಲೆ ಬಗ್ಗಿ ತ್ಯಾಜ್ಯ ಹೊರ ತೆಗೆಯುವ ಸಮಯದಲ್ಲಿ ವಿಷ ಗಾಳಿ ಸೇವಿಸಿದ ಇಬ್ಬರೂ ಅಸ್ವಸ್ಥರಾಗಿ, ಸಾವನ್ನಪ್ಪಿದ್ದರು.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 18 July 23

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us