ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ -ರೇಣುಕಾಚಾರ್ಯ

| Updated By: ಆಯೇಷಾ ಬಾನು

Updated on: Jan 25, 2022 | 6:08 PM

ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ. ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ. ಸುಮ್ಮನೆ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಶಾಸಕರೆಲ್ಲ ಒಟ್ಟಾಗಿದ್ದೇವೆ ಎಂದು ರೇಣುಕಾಚಾರ್ಯ ತಿರುಗೇಟು ಕೊಟ್ಟಿದ್ದಾರೆ.

ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ -ರೇಣುಕಾಚಾರ್ಯ
ಎಂಪಿ.ರೇಣುಕಾಚಾರ್ಯ
Follow us on

ದಾವಣಗೆರೆ: ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಕಾಂಗ್ರೆಸ್ ಶಾಸಕರೇ ಬಿಜೆಪಿ ನಾಯಕರ ಸಂಪರ್ಕದಲ್ಲಿ ಇದ್ದಾರೆ. ಬೆಳಗಾವಿ ಅಧಿವೇಶನ ವೇಳೆ ಮಾತಾಡಿದ್ದಾರೆ ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹೇಳಿದ್ದಾರೆ.

ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ. ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ. ಸುಮ್ಮನೆ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಶಾಸಕರೆಲ್ಲ ಒಟ್ಟಾಗಿದ್ದೇವೆ ಎಂದು ರೇಣುಕಾಚಾರ್ಯ ತಿರುಗೇಟು ಕೊಟ್ಟಿದ್ದಾರೆ.

ನನಗೆ ಸಚಿವ ಸ್ಥಾನ ಬೇಕು ಎಂದು ನಾನು ಹಠ ಹಿಡಿದಿಲ್ಲ
ಇನ್ನು ಇದೇ ವೇಳೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಬೇಕು ಎಂದು ನಾನು ಹಠ ಹಿಡಿದಿಲ್ಲ. ನಾನು ಹಠ ಹಿಡಿದಿದ್ದರೆ ಯಾವಾಗಲೋ ಸಚಿವನಾಗುತ್ತಿದ್ದೆ. ಒಂದೂವರೆ ತಿಂಗಳಿಂದ ಯತ್ನಾಳ್, ನಾನು ಆತ್ಮೀಯರಾಗಿದ್ದೇವೆ. ಸಚಿವ ಸ್ಥಾನಕ್ಕೆ ಹೋರಾಟ ಮಾಡಲ್ಲ, ಪಕ್ಷಕ್ಕೆ ಮುಜುಗರ ತರಲ್ಲ. ನಾನು ಆಡಳಿತ ಪಕ್ಷದ ಶಾಸಕ‌ ಯಾರ ವಿರುದ್ಧ ಹೋರಾಟ ಮಾಡಲಿ. ಮೇಲಾಗಿ ನನಗೆ ಸಚಿವ ಸ್ಥಾನ ನೀಡಿ ಎಂದು ಎಲ್ಲೂ ಕೇಳಿಲ್ಲ. ಈ ಬಗ್ಗೆ ನಾಲ್ಕು ಗೋಡೆಗಳ ನಡುವೆ ಪಕ್ಷದ ವರಿಷ್ಠರಿಗೆ ಏನು ಹೇಳಬೇಕೋ ಅದನ್ನ ಹೇಳುವೆ . ಎಂದರು.

ಡಿಕೆ ಶಿವಕುಮಾರ್ ಹೇಳಿಕೆಗೆ MLC ಸಿ.ಪಿ.ಯೋಗೇಶ್ವರ್ ಟಾಂಗ್
ಇನ್ನು ಮತ್ತೊಂದೆಡೆ ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ MLC ಸಿ.ಪಿ.ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಚುನಾವಣಾ ವರ್ಷ ಇರುವುದರಿಂದ ಹೇಳಿಕೆಗಳು ಸಹಜ. ಈವರೆಗೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋದವರು ಕಡಿಮೆ. ಕಾಂಗ್ರೆಸ್, ಜೆಡಿಎಸ್‌ನಿಂದ ಹಲವರು ಬಿಜೆಪಿಗೆ ಬಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ. ಇದೀಗ ಗೊಂದಲ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ: ಸಿ.ಪಿ. ಯೋಗೇಶ್ವರ್
ನನ್ನ ಅಚಲ ವಿಶ್ವಾಸವನ್ನು ಅಲುಗಾಡಿಸಲು ಆಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ. ಕಾಂಗ್ರೆಸ್‌ನವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಧ್ಯೆ ಗೊಂದಲವಿದೆ. ಅಧಿಕಾರ, ನಾಯಕನಾಗಬೇಕೆಂದು ಅವರಿಬ್ಬರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವವರೇ ಹೆಚ್ಚಾಗಿದ್ದಾರೆ. ಮುಂದಿನ ತಿಂಗಳಿನಿಂದ ಬಿಜೆಪಿಗೆ ಹೆಚ್ಚು ಜನ ಬರುತ್ತಾರೆ. ಕಾದು ನೋಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ನಾನು ಸೋತಾಗಲೂ ನನಗೆ 2 ಬಾರಿ ಸಚಿವ ಸ್ಥಾನವನ್ನು ಬಿಜೆಪಿ ನೀಡಿದೆ. ಈಗ ಎಂಎಲ್‌ಸಿ ಮಾಡಿದೆ ಇದನ್ನು ಪದೇಪದೆ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಾನು ಇದರ ಬಗ್ಗೆ ಸುದ್ದಿಗೋಷ್ಠಿ ಮೂಲಕ‌‌ ಸ್ಪಷ್ಟಪಡಿಸುತ್ತೇನೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಇದನ್ನೂ ಓದಿ: ಧನುಷ್​​ರಿಂದ ಬೇರ್ಪಟ್ಟ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಐಶ್ವರ್ಯಾ; ಇಲ್ಲಿದೆ ಫೋಟೋ

ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್