Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? – ರೇಣುಕಾಚಾರ್ಯ ಗರಂ

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? - ರೇಣುಕಾಚಾರ್ಯ ಗರಂ
ಎಂಪಿ.ರೇಣುಕಾಚಾರ್ಯ
Follow us
TV9 Web
| Updated By: ಆಯೇಷಾ ಬಾನು

Updated on:Jan 24, 2022 | 1:00 PM

ದಾವಣಗೆರೆ: ಕ್ಯಾಬಿನೆಟ್ ಪುನಾರಚನೆಗೆ ಹೈಕಮಾಂಡ್ ಒಲವು ತೋರುತ್ತಿದ್ದಂತೆ, ಆಡಳಿತ ಪಕ್ಷ ಬಿಜೆಪಿಯೊಳಗೆ ದೊಡ್ಡ ಸಂಚಲನ ಎದ್ದಿದೆ. ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೀತಾ ಬಂತು. ಸರ್ಕಾರಕ್ಕೆ ಇರೋದು ಇನ್ನೊಂದು ವರ್ಷವಷ್ಟೇ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಇದೆ. ಒಂದು ವರ್ಷದೊಳಗೆ ಎಲೆಕ್ಷನ್ಗೆ ರೆಡಿಯಾಗ್ಬೇಕು. ಹೀಗಾಗೇ ಹೈಕಮಾಂಡ್ ಈಗಲೇ ಬೊಮ್ಮಾಯಿ ಕ್ಯಾಬಿನೆಟ್ಗೆ ಹೊಸ ಟಚ್ಕೊಡಲು ಮುಂದಾಗಿದೆ. ಕ್ಯಾಬಿನೆಟ್ ಈಗ ಪುನಾರಚನೆ ಆಗುತ್ತೆ.. ಆಗ ಆಗುತ್ತೆ ಅಂತಾ ಮಾರ್ಚ್ನಲ್ಲಿ ಕ್ಯಾಬಿನೆಟ್ ಪುನಾರಚನೆಗೆ ಮುಹೂರ್ತ್ ಫಿಕ್ಸ್ ಆಗೋದು ಬಹುತೇಕ ಖಚಿತವಾಗಿದೆ. ಈ ನಡುವೆ ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇದು ನಮಗೆ ಬೇಜಾರ ಆಗುತ್ತೆ ಅವಮಾನ ಆಗುತ್ತೇ. ಇಂಥ ಸಚಿವರು ಬೇಕಾ? ಎಂದು ರೇಣುಕಾಚಾರ್ಯ ಕೆಲ ಸಚಿವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸಚಿವ ಸಂಪುಟದಲ್ಲಿ ಈಗ 4 ಸಚಿವ ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾರ್ಚ್‌ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ. ಈ ವಿಚಾರ ನಾನು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮಾತಾಡಿದ್ದೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ. ಅದನ್ನು ಮಾಡಿ ತೊರಿಸುವ ತಾಕತ್ತು ಇದೆ. ಇದು ಚುನಾವಣೆ ವರ್ಷ ವಿಳಂಬ ಮಾಡಿ ಸಚಿವ ಸ್ಥಾನ ಕೊಟ್ಟರೇ ಉಪಯೋಗವಿಲ್ಲ. ಕೊಡುವುದಿದ್ದರೇ ಬೇಗ ಕೊಡಿ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಇನ್ನು ಬಿ.ವೈ.ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಅವರದ್ದೆ ಆದ ವರ್ಚಸ್ಸು ಇದೆ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಆದ್ರೆ ಹೊಸ ಮುಖಗಳಿವೆ ಅವಕಾಶ ನೀಡಿ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಅನುಕೂಲ ಆಗುತ್ತದೆ ಎಂದರು.

ರಮೇಶ್ ಜಾರಕಿಹೊಳಿಗೂ ಸಂಪುಟದಲ್ಲಿ ಸ್ಥಾನ ನೀಡಬೇಕು ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿಗೂ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಹೊಸಕೋಟೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇದು ಸಿಎಂ ಬೊಮ್ಮಾಯಿ, ಹೈಕಮಾಂಡ್​ಗೆ ಬಿಟ್ಟ ನಿರ್ಧಾರ. ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಒತ್ತಡವೂ ಇದೆ. ರಮೇಶ್ ಸಹ ನಮ್ಮ‌ ಜತೆ ರಾಜೀನಾಮೆ ಕೊಟ್ಟು ಬಂದವರು. ಕಾರಣಾಂತರಗಳಿಂದ ಅವರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಇದೀಗ ಅವರಿಗೂ ಸಹ ಸಚಿವ ಸ್ಥಾನ ನೀಡಬೇಕು ಎಂದು ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಲಬುರಗಿಯಲ್ಲಿ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಕಲಬುರಗಿ ಜಿಲ್ಲಾ ಬಿಜೆಪಿಯಲ್ಲಿ ನಾನು ಹಿರಿಯನಿದ್ದೇನೆ. ಕಲಬುರಗಿ ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ಖಂಡಿತ ಅವಕಾಶ ಸಿಗುತ್ತದೆ. ಸಂಪುಟ ವಿಸ್ತರಣೆ, ಪುನಾರಚನೆ ಸಿಎಂಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ರಾಜಕುಮಾರ ಪಾಟೀಲ್ ತೇಲ್ಕೂರ್ ಹೇಳಿಕೆ

ಇದನ್ನೂ ಓದಿ:ಎಲ್ಲರೂ ಒಮಿಕ್ರಾನ್ ಸೋಂಕಿಗೆ ಒಳಗಾಗುತ್ತಾರೆಯೇ?; ಇಲ್ಲಿದೆ ವಿಶ್ವ ಆರೋಗ್ಯ ಸಂಸ್ಥೆಯ ಉತ್ತರ 

Published On - 11:38 am, Mon, 24 January 22

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್