AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

94 ವರ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಭೈರತಿ ಸುರೇಶ್ ಹಾಗೂ ಮಾಜಿ ಸಚಿವ ಹೆಚ್. ಆಂಜನೇಯ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಆರೋಗ್ಯ ವಿಚಾರಿಸಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಶಾಮನೂರು ಶಿವಶಂಕರಪ್ಪ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Nov 22, 2025 | 7:43 PM

Share

ದಾವಣಗೆರೆ, ನವೆಂಬರ್​ 22: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) (94)  ಕೆಲ ವಯೋ ಸಹಜ‌ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ 

ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಮನೂರು ಶಿವಶಂಕರಪ್ಪರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್​ ಮಾವನ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್ ಆಂಜನೇಯ ಸಾಥ್​ ನೀಡಿದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ಅಸಾಧ್ಯ ಎಂದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ಅಸಾಧ್ಯ. ಯಾರು ಏನೇ ಅಂದರೂ ಬದಲಾವಣೆ ಮಾಡುವುದು ಅಸಾಧ್ಯ ಎಂದು ಹೇಳಿದ್ದಾರೆ.

ಜಿ.ಎಂ.ಸಿದ್ದೇಶ್ವರ ಬಣ ದೆಹಲಿಗೆ ಹೋಗಲಿ ನಮ್ಮ ಆಕ್ಷೇಪವಿಲ್ಲ. ಹೇಳಿಕೆ ನೀಡದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಹಾಗಾಗಿ ನಾವು ಸುಮ್ಮನಿದ್ದೇವೆ. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮಾತಾಡಿ ಮಾತಾಡಿ ಒಬ್ಬರು ಪಕ್ಷದಿಂದಲೇ ಉಚ್ಚಾಟನೆ ಆಗಿದ್ದಾರೆ ಎಂದು ಪರೋಕ್ಷವಾಗಿ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಹಂಚಿಕೆ ಜಟಾಪಟಿ ಮಧ್ಯೆ ಅಮಿತ್ ಶಾ ಭೇಟಿಯಾದ ರಾಜಣ್ಣ ಪುತ್ರ ರಾಜೇಂದ್ರ

ಮಾಜಿ ಸಂಸದ ಜಿಎಂ ಸಿದ್ದೇಶ್ವರ ಬಣ ಮೊದಲಿನಿಂದಲೂ ಇದೇ ಬೇಡಿಕೆ ಇದೆ. ಬಿವೈ ವಿಜಯೇಂದ್ರ ಹಾಗೂ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ ನಾಗಪ್ಪ ಅವರ ಬದಲಾವಣೆ ಆಗಬೇಕು ಎಂದು. ಈವರೆಗೂ ಅದೇ ಬೇಡಿಕೆ ಇದೆ. ಆದರೆ ಪಕ್ಷದ ವರಿಷ್ಠರು ಯಾವುದೇ ಕ್ರಮಕೈಗೊಂಡಿಲ್ಲ. ಯಾರು ಬದಲಾಗಿಲ್ಲ. ಈಗ ಹಿಂದು ಹಿಂದು ಎನ್ನವ ಆತ (ಯತ್ನಾಳ್) ಜೆಡಿಎಸ್​ನಲ್ಲಿದ್ದಾಗ ಮಹ್ಮದ್ ಪೈಗಂಬರ್ ಆಗಿದ್ದಾರೆ. ಎಲ್ಲಾ ನಾಟಕ ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:42 pm, Sat, 22 November 25