ಪದೇಪದೇ ಪೆಟ್ರೋಲ್ ಬೆಲೆ ಹೆಚ್ಚಳದ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ, ನಿಮಗೆ ಪೆಟ್ರೋಲ್ ಬೇಕಾದರೆ ನಾನೇ ಕೊಡಿಸುವೆ: ಸಂಸದ ಜಿ ಎಂ ಸಿದ್ದೇಶ್ವರ್

ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ ಎಂದು ಅವರು ಸಹ ಅವರು ಹೇಳಿದ್ದಾರೆ.

ಪದೇಪದೇ ಪೆಟ್ರೋಲ್ ಬೆಲೆ ಹೆಚ್ಚಳದ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ, ನಿಮಗೆ ಪೆಟ್ರೋಲ್ ಬೇಕಾದರೆ ನಾನೇ ಕೊಡಿಸುವೆ: ಸಂಸದ ಜಿ ಎಂ ಸಿದ್ದೇಶ್ವರ್
ಸಂಸದ ಜಿ ಎಂ ಸಿದ್ದೇಶ್ವರ್
Follow us
TV9 Web
| Updated By: guruganesh bhat

Updated on:Aug 08, 2021 | 5:51 PM

ದಾವಣಗೆರೆ: ಪದೇಪದೆ ಪೆಟ್ರೋಲ್‌ ದರ ಏರಿಕೆಯ ಬಗ್ಗೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದು ಮನವಿ ಮಾಡಿದ್ದಾರೆ. ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ. ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ (Petrol Price Hike) ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ. ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಬಹುದು ಎಂದು ಅವರು ವಿನಂತಿಯನ್ನೂ ಸಹ ಮಾಡಿಕೊಂಡಿದ್ದಾರೆ.

ಇತ್ತೀಚಿಗೆ ಪೆಟ್ರೋಲ್ ಬೆಲೆ ಹೆಚ್ಚುತ್ತಿರುವ ಕುರಿತು ಬಿಜೆಪಿ ಸಂಸದರಾದ ಅವರಿಗೆ ಸಹಜವಾಗಿಯೇ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಆದರೆ ಪೆಟ್ರೋಲ್ ಬೆಲೆ ಹೆಚ್ಚಳದ ಕುರಿತು ಉತ್ತರಿಸುವುದು ಪೇಚಿಗೀಡು ಮಾಡಬಹುದು ಅಂತನಿಸಿ ಸಂಸದ ಜಿ ಎಂ ಸಿದ್ದೇಶ್ವರ ಅವರು ನುಣುಚಿಕೊಳ್ಳಲು ಯತ್ನಿಸಿದರು. ಜತೆಗೆ ಪತ್ರಕರ್ತರಿಗೆ ಪೆಟ್ರೋಲ್ ಅಗತ್ಯವಿದ್ದಲ್ಲಿ ತಾವೇ ಸ್ವತಃ ಕೊಡಿಸುವುದಾಗಿಯೂ ಹೇಳಿದರು.

ಕಾಂಗ್ರೆಸ್ ಸೇರಿದಂತೆ ಕೆಲ ಪಕ್ಷಗಳು ಸೇರಿ ಸಂಸತ್ ಅಧಿವೇಶನ ನಡೆಸಲು ಬಿಡುತ್ತಿಲ್ಲ. ಸಂಸತ್ ಅಧಿವೇಶನದಲ್ಲಿ ದೇಶದ ವಿಚಾರ ಚರ್ಚೆ ಆಗಬೇಕು.  ಆದರೆ ವಿಪಕ್ಷಗಳು ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಕೃಷಿ ಕಾಯ್ದೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಆಗಲಿ. ಬೇಕಿದ್ದ ಕೃಷಿ ಕಾಯ್ದೆಗಳ ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲ ಬದಲಾವಣೆ ತರಬಹುದು‌. ಆದರೆ ಚರ್ಚೆಗೆ ಅವಕಾಶವೇ ಇಲ್ಲದಂತಾಗಿದೆ ಎಂದು ಸಹ ಸಂಸದ ಜಿ ಎಂ ಸಿದ್ದೇಶ್ವರ್ ಹೇಳಿದರು.

ಇದನ್ನೂ ಓದಿ:  

Petrol Price Today: ಸತತ 22 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

ಪೆಟ್ರೋಲ್​ಗೆ ಹಣ ಸುರಿದು ಕಂಗಾಲಾಗುತ್ತಿರುವವರಿಗೆ ಸಿಹಿ ಸುದ್ದಿ; ಓಲಾ ಇ-ಸ್ಕೂಟರ್ ಆಗಸ್ಟ್ 15 ರಂದು ಲಾಂಚ್ ಆಗುತ್ತಿದೆ!

(MP GM Siddeshwar says Dont question me on petrol price hike I will give you petrol if you want)

Published On - 5:16 pm, Sun, 8 August 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ