ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಇದು ಸೌಹಾರ್ದಯುತ ಭೇಟಿ ಅಷ್ಟೇ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಸ್ಪಷ್ಟನೆ

ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರೂ ಮಾತನಾಡಿಲ್ಲ. ನನ್ನ, ಅವರ ಭೇಟಿಗೆ ರಾಜಕೀಯ ಅರ್ಥ ಬೇಡ. ರೇಣುಕಾಚಾರ್ಯಗೆ ಟೀ ಕುಡಿಸಿ ಕಳುಹಿಸಿದ್ದೇನೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿಲ್ಲ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಇದು ಸೌಹಾರ್ದಯುತ ಭೇಟಿ ಅಷ್ಟೇ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಸ್ಪಷ್ಟನೆ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2023 | 5:22 PM

ದಾವಣಗೆರೆ, ಆಗಸ್ಟ್​ 27: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ‘ಆಪರೇಷನ್ ಹಸ್ತ’ ಮೆಗಾ ಪ್ಲ್ಯಾನ್​ ಆರಂಭಿಸಿದ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಪುಷ್ಟಿ ಎಂಬಂತೆ ಇತ್ತೀಚೆಗೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್​ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಸದ್ಯ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಎಂ.ಪಿ.ರೇಣುಕಾಚಾರ್ಯ ಭೇಟಿ ಮಾಡಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಸೌಹಾರ್ದಯುತ ಭೇಟಿ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರೂ ಮಾತನಾಡಿಲ್ಲ. ನನ್ನ, ಅವರ ಭೇಟಿಗೆ ರಾಜಕೀಯ ಅರ್ಥ ಬೇಡ. ರೇಣುಕಾಚಾರ್ಯಗೆ ಟೀ ಕುಡಿಸಿ ಕಳುಹಿಸಿದ್ದೇನೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಪಕ್ಷದ ಬಗ್ಗೆ ಮಾತನಾಡಿದರು. ಯಡಿಯೂರಪ್ಪಗೆ ಬಿಜೆಪಿ ಅನ್ಯಾಯ ಮಾಡಿದೆ. ದಾವಣಗೆರೆಯಿಂದ ಲೋಕಸಭೆ ಬಿಜೆಪಿ ಆಕಾಂಕ್ಷಿ ಎಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರೂ ಮಾತನಾಡಿಲ್ಲ ಎಂದರು.

ಇದನ್ನೂ ಓದಿ: ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರ ಬೇಡ: ಹೆಚ್​ಡಿ ಕುಮಾರಸ್ವಾಮಿ

ಡಿಸಿಎಂ ಡಿಕೆ ಶಿವಕುಮಾರ್ ಕರೆ ನನಗೆ ಮಾಡಿಲ್ಲ, ಗೊತ್ತೂ ಇಲ್ಲ. ಈ ಸಂಬಂಧ ನನಗೆ ಯಾರೂ ಮಾತನಾಡಿಲ್ಲ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ಯೋಚನೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ, ಕಾಂಗ್ರೆಸ್ ನಲ್ಲಿ ಬಹಳಷ್ಟು ಜನರಿದ್ದಾರೆ.

ವರಮಹಾಲಕ್ಷ್ಮೀ ಪೂಜೆಗೆ ದೇವೇಂದ್ರಪ್ಪ ಕುಟುಂಬ ಆಹ್ವಾನದ ಮೇರೆಗೆ ಜಗಳೂರಿಗೆ ಪ್ರಭಾ ಮಲ್ಲಿಕಾರ್ಜುನ್  ಹೋಗಿದ್ದರು ಅಷ್ಟೇ. ಬಿಜೆಪಿಯವರು ಮಾಡಿದ ಹೊಸ ಯೋಜನೆಗಳು ಯಾವವೂ ಇಲ್ಲ. ಕುಂದುವಾಡ ಕೆರೆ ಹಾಳು ಮಾಡಿದ್ದಾರೆ. ಶೇಕಡಾ 40ರಷ್ಟು ಕಮೀಷನ್ ಪಡೆದು ಹಾಳು ಮಾಡಿದ್ದಾರೆ. ಬರಪೀಡಿತ ಪ್ರದೇಶಗಳ ಘೋಷಣೆಗೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯವಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ. ಕೇಂದ್ರ ಸರ್ಕಾರದ ಸಹಕಾರ ಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್