ಜೈಲಿನಿಂದ ಹೊರಬಂದ ಮುರುಘಾಶ್ರೀ ಭಾವುಕ: ಪ್ರಕರಣದ ಬಗ್ಗೆ ಶರಣರು ಹೇಳಿದ್ದಿಷ್ಟು
ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಇದೀಗ ಬಿಡುಗಡೆಯಾಗಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ದಾವಣಗೆರೆ, ನವೆಂಬರ್ 16: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆದ ಮುರುಘಾಶ್ರೀ ದಾವಣಗೆರೆ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ. ಮೂರು ಗಂಟೆಯಿಂದ ಕೋರ್ಟ ವಿಸಿಗೆ ಹಾಜರಾಗಲಿರುವ ಸ್ವಾಮೀಜಿ, ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನ ಭೇಟಿ ಆಗಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿದ್ದಾರೆ. ಬಳಿಕ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ: Chitradurga Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ
ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು ಜೈಲುಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ನವೆಂಬರ್ 8ರಂದು ಜಾಮೀನು ನೀಡಿತ್ತು ಹೀಗಾಗಿ ಇಂದು ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗ ಕೋರ್ಟ್ ಆದೇಶ ಕಾಪಿ ಕಾರಾಗೃಹಕ್ಕೆ ಸಲ್ಲಿಸಲಾಗಿದೆ. ಒಂದು ವೇಳೆ ನಿನ್ನೆ ಕಾರಾಗೃಹಕ್ಕೆ ಅಧಿಕೃತ ಆದೇಶ ಕಾಪಿ ಸಲ್ಲಿಸಿದರೆ ಚಿತ್ರದುರ್ಗದ ಮುರುಘಾಶ್ರೀಗೆ ನಿನ್ನೆಯೇ ಬಿಡುಗಡೆಯಾಗುವ ಸಾಧ್ಯತೆ ಇತ್ತು ಎನ್ನಲಾಗಿತ್ತು.
ಇದನ್ನೂ ಓದಿ: Murugha Mutt Case: ಇಂದು ಮುರುಘಾಶ್ರೀ ಬಿಡುಗಡೆ ಸಾಧ್ಯವಿಲ್ಲ ಎಂದ ಸರ್ಕಾರಿ ವಕೀಲ
2ನೇ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಇಂದು ಮುಂದೂಡಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿತ್ತು. ಸರ್ಕಾರಿ ವಕೀಲ ಜಗದೀಶ್ ವಾದ ಮಂಡನೆ ಮಾಡಿಲಿದ್ದಾರೆ. 2ನೇ ಪೋಕ್ಸೋ ಪ್ರಕರಣದಲ್ಲಿ ಬಾಡಿ ವಾರಂಟ್ ಹಿನ್ನೆಲೆ ನ್ಯಾಯಾಂಗ ಬಂಧನವಾಗಿ ವಿಸ್ತರಿಸಲು ಮನವಿ ಬಗ್ಗೆ ವಾದ ಮಂಡನೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:39 pm, Thu, 16 November 23