AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಗಣ್ಯರು ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಪ್ರತಿಮೆ ಕೆತ್ತನೆಯ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ ಎಂದು ಅರುಣ್ ಯೋಗಿರಾಜ್ ಹೇಳಿದ್ದಾರೆ.

ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ
ದಿ.ಶಾಮನೂರು ಶಿವಶಂಕರಪ್ಪ
ಗಂಗಾಧರ​ ಬ. ಸಾಬೋಜಿ
|

Updated on:Dec 26, 2025 | 9:17 PM

Share

ಮೈಸೂರು, ಡಿಸೆಂಬರ್​ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ

ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್ ಆವರಣದ ನೂರು ಎಕರೆ ಪ್ರದೇಶದಲ್ಲಿ ಶುಕ್ರವಾರದಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ಪುತ್ಥಳಿಯನ್ನು ಗಣ್ಯರು ಅನಾವರಣಗೊಳಿಸಿದ್ದಾರೆ.

ಅರುಣ್ ಯೋಗಿರಾಜ್ ಟ್ವೀಟ್​​

ದಿ.ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿ ಕೆತ್ತನೆ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಾಜಿ ಸಚಿವ ಮತ್ತು ಖ್ಯಾತ ಸಮಾಜ ಸುಧಾರಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಪ್ರತಿಮೆಯನ್ನು ಕೆತ್ತನೆ ಮಾಡುವ ಅವಕಾಶ ನನಗೆ ಸಿಕ್ಕಿದ್ದು ಭಾಗ್ಯ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಡಿಸೆಂಬರ್​​ 14ರಂದು ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಡಿಸೆಂಬರ್​​ 14ರ ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದರು. ಅವರ ಪತ್ನಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

ಇನ್ನು ಇಂದು ದಾವಣಗೆರೆಯಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ, ಬಿಎಸ್​ ಯಡಿಯೂರಪ್ಪ, ಬಸವರಾಜ್​ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್​, ಪಂಚಪೀಠದ ರಂಭಾಪುರಿ ಕಾಶಿ ಶ್ರೀಶೈಲ ಉಜ್ಜಯಿನಿ ನಾಲ್ವರು ಹಾಗೂ ಇತ್ತ ಸಿರಿಗೆರೆ ಸುತ್ತೂರು ಸಿದ್ದಗಂಗಾ, ಪಂಚಮಸಾಲಿ ಹೀಗೆ ಸ್ವಾಮೀಜಿಗಳು ಭಾಗವಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:16 pm, Fri, 26 December 25

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ