ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು

ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪುತ್ರನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಳ್ಳಕೆರೆ ಬಳಿ ಕಾರು ಪಲ್ಟಿ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು
ನಾಡೋಜ ಬೆಳಗಲ್ಲು ವೀರಣ್ಣ
Follow us
ಆಯೇಷಾ ಬಾನು
|

Updated on:Apr 02, 2023 | 11:17 AM

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಕಾರ್ ಪಲ್ಟಿಯಾಗಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ(91) ಸಾವನ್ನಪ್ಪಿದ್ದಾರೆ. ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರು. ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.belagallu veeranna

ನಿನ್ನೆಯಷ್ಟೇ ಕಾರ್‌ ಸರ್ವೀಸ್ ಮಾಡಿಸಲಾಗಿತ್ತು. ಇಂದು ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಹೊರಟ‌ ವೇಳೆ ಕಾರ್ ನ ಹಿಂಬದಿ ವೀಲ್ ನಲ್ಲಿ ತಾಂತ್ರಿಕ‌ ದೋಷ ಕಾಣಿಸಿತ್ತು. ಚಳ್ಳಕೆರೆ ಪಟ್ಟಣ ತಲುಪಿದ‌ ಬಳಿಕ ರಿಪೇರಿ ಮಾಡಿಸಿದರಾಯಿತು ಎಂದುಕೊಂಡಿದ್ದೆವು. ಹಿರೇಹಳ್ಳಿ ಬಳಿ ಏಕಾಏಕಿ ಕಾರ್ ವ್ಹೀಲ್ ಎಕ್ಸಲ್ ಕಳಚಿದ ಕಾರಣ ಕಾರ್‌ ಪಲ್ಟಿ ಆಗಿದ್ದು ದುರಂತ ಸಂಭವಿಸಿದೆ ಎಂದು ಮೃತರ ಪುತ್ರ, ಗಾಯಾಳು ಹನಹಮಂತಪ್ಪ ತಿಳಿಸಿದ್ದಾರೆ.

ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದಾರೆ. ಮೂಲತಃ ತೊಗಲು ಗೊಂಬೆಯಾಟದ ಕಲಾವಿದರಾದ ಇವರು ತೊಗಲು ಗೊಂಬೆಯಾಟದ ಹಿರಿಮೆಯನ್ನು ಸಪ್ತ ಸಾಗರದ ಆಚೆ ತಲುಪಿಸಿದ ಅಪರೂಪದ ಕಲಾವಿದರು. ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನು ಕಟ್ಟಿ ಊರೂರು, ರಾಜ್ಯ, ದೇಶ, ವಿದೇಶ ಸುತ್ತಿದವರು. ವೀರಣ್ಣನವರು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Sun, 2 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ