AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮುಖ್ಯಶಿಕ್ಷಕರ ಬೇಜವಾಬ್ದಾರಿತನಕ್ಕೆ ಬಿಸಿಯೂಟದಿಂದ ವಂಚಿತರಾದ ಶಾಲೆ ಮಕ್ಕಳು, ವಿದ್ಯಾರ್ಥಿಗಳಿಂದಲೇ ಅಡುಗೆ ತಯಾರಿ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ಆರು ತಿಂಗಳಿಂದ ಮಧ್ಯಾಹ್ನದ ಬಿಸಿಯೂಟ ತಯಾರಿಸಿಲ್ಲ. ಶಾಲೆ ಮಕ್ಕಳು ಬಿಸಿಯೂಟದಿಂದ ವಂಚಿತರಾಗಿದ್ದಾರೆ.

ದಾವಣಗೆರೆ: ಮುಖ್ಯಶಿಕ್ಷಕರ ಬೇಜವಾಬ್ದಾರಿತನಕ್ಕೆ ಬಿಸಿಯೂಟದಿಂದ ವಂಚಿತರಾದ ಶಾಲೆ ಮಕ್ಕಳು, ವಿದ್ಯಾರ್ಥಿಗಳಿಂದಲೇ ಅಡುಗೆ ತಯಾರಿ
ಹಿರೇಮಲ್ಲನಹೊಳೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಂಡು ಬಂದ ದೃಶ್ಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಆಯೇಷಾ ಬಾನು|

Updated on: Jul 19, 2023 | 7:30 AM

Share

ದಾವಣಗೆರೆ: ಮುಖ್ಯಶಿಕ್ಷಕರ ಬೇಜವಾಬ್ದಾರಿಯಿಂದ ಶಾಲೆ ಮಕ್ಕಳು ಬಿಸಿಯೂಟದಿಂದ(Bisiuta) ವಂಚಿತರಾಗಿದ್ದಾರೆ. ​​ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ಆರು ತಿಂಗಳಿಂದ ಮಧ್ಯಾಹ್ನದ ಬಿಸಿಯೂಟ ತಯಾರಿಸಿಲ್ಲ. ಹೀಗಾಗಿ ಶಾಲೆ ಮಕ್ಕಳು ಮನೆಯಿಂದಲೇ ಊಟ ತರುವಂತಾಗಿದೆ. ಕೆಲವೊಮ್ಮೆ ಮಕ್ಕಳೇ ಊಟ ತಯಾರಿಸುತ್ತಿದ್ದಾರೆ.

ಸ್ವಚ್ಛತೆ ಹಾಗೂ ಇತರೆ ವಿಚಾರಕ್ಕೆ ಶಾಲೆ ಮುಖ್ಯಶಿಕ್ಷಕರು ಮತ್ತು ಬಿಸಿಯೂಟ ಸಿಬ್ಬಂದಿ ನಡುವೆ ಗಲಾಟೆ ನಡೆದಿದ್ದು ನಾವು ಇನ್ನುಮುಂದೆ ಅಡುಗೆ ಮಾಡಲ್ಲ ಎಂದು ಸಿಬ್ಬಂದಿ ಕೆಲಸ ಬಿಟ್ಟು ಹೊರಡಿದ್ದಾರೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಸಿಬ್ಬಂದಿ ಕೊರತೆ ಇದೆ. ಅಲ್ಲದೆ ಮತ್ತೊಂದೆಡೆ ಮಕ್ಕಳು ಬಿಸಿಯೂಟದಿಂದ ವಂಚಿತರಾಗುತ್ತಿದ್ದಾರೆಂದು ಸ್ಥಳೀಯರು ಹೋರಾಟ ನಡೆಸಿದ್ದರು. ಆಗ ಶಿಕ್ಷಕರೇ ಅಡುಗೆ ಮಾಡಿ ಮಕ್ಕಳಿಗೆ ಊಟ ಬಡಿಸಿದ್ದರು. ಆದ್ರೆ ಈಗ ಮತ್ತೆ ಹಳೆಯ ವ್ಯವಸ್ಥೆಯೇ ಮುಂದುವರೆದಿದೆ. ಕಳೆದ ಆರು ತಿಂಗಳಿನಿಂದ ಮಕ್ಕಳಿಗೆ ಊಟ ನೀಡದೇ ಬೇಜವಾಬ್ದಾರಿಯಿಂದ ವರ್ತಿಸಿದ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಹೆದ್ದಾರಿ ಪಕ್ಕದ ಮನೆಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಗ್ಯಾಂಗ್​ ಬಂಧನ; 25 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ವಶ

ಮಹಿಳಾ ಕಾಲೇಜು ಹಾಗೂ ಮಹಿಳಾ ಹಾಸ್ಟೆಲ್​ಗಳಿಗೆ ಪೊಲೀಸ್ ಬೀಟ್ ವ್ಯವಸ್ಥೆ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲಾ ಪೊಲೀಸ್‌ ವತಿಯಿಂದ ಮಹಿಳಾ ಸುರಕ್ಷತೆಯ ದೃಷ್ಟಿಯಿಂದ ದಾವಣಗೆರೆ ಜಿಲ್ಲೆಯ ಎಲ್ಲಾ ಅಂದ್ರೆ ದಾವಣಗೆರೆ ನಗರ ಹಾಗೂ ಗ್ರಾಮಾಂತರ ಹಾಗೂ ಚನ್ನಗಿರಿ ಸೇರಿ ಮೂರು ವಿಭಾಗದ 245 ಮಹಿಳಾ ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳಿಗೆ ಪೊಲೀಸ್ ಸಿಬ್ಬಂದಿ ಬೀಟ್ ವ್ಯವಸ್ಥೆ ಮಾಡಲಾಗಿದೆ. ಸದರಿ ಬೀಟ್ ವ್ಯವಸ್ಥೆಯಲ್ಲಿ ಪೊಲೀಸ್‌ ಬೀಟ್ ಸಿಬ್ಬಂದಿ ಪ್ರತಿದಿನ ಕಾಲೇಜು ಆರಂಭದ ಹಾಗೂ ಮುಕ್ತಾಯದ ಸಮಯದಲ್ಲಿ ಕಾಲೇಜುಗಳ ಆಡಳಿತ ಅಧಿಕಾರಿ ಸಿಬ್ಬಂದಿ ಭೇಟಿ ಮಾಡಿ ಹಾಗೂ ವಿದ್ಯಾರ್ಥಿನಿಯರೊಂದಿಗೆ ಸಂವಹನ ನಡೆಸಬೇಕು ಎಂದು ದಾವಣಗೆರೆ ಎಸ್ಪಿ ಡಾ. ಕೆ.ಅರುಣ್ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕಾಲೇಜು ಆವರಣದಲ್ಲಿ ಕಿಡಿಗೇಡಿಗಳ ಕೀಟಲೆ, ಚುಡಾಯಿಸುವುದು ಮತ್ತು ಅನುಮಾನಸ್ಪದ ವ್ಯಕ್ತಿಗಳ ಓಡಾಟಗಳ ಮೇಲೆ ನಿಗಾವಹಿಸುವಂತೆ. ಅಲ್ಲದೇ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ ಅವರಲ್ಲಿ ತುರ್ತು ಸಹಾಯವಾಣಿ 112 ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ, ಹಾಸ್ಟೇಲ್ ನಿರ್ವಹಣೆ ಅಧಿಕಾರಿ ಸಿಬ್ಬಂದಿ ಜೊತೆ ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಬೇಕೆಂದು ಎಸ್ಪಿ ಸೂಚಿಸಿದ್ದಾರೆ.

ದಾವಣಗೆರೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ