ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ, ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮಾಜವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಸಿಎಂ, ಅಭಿನವ ಬಸವಣ್ಣ ಅಂದ್ರು ಪ್ರಸನ್ನಾನಂದ‌ಪುರಿಶ್ರೀ
ಬಸವರಾಜ ಬೊಮ್ಮಾಯಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 09, 2023 | 5:31 PM

ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ಒಂದು ದೊಡ್ಡ ಶಕ್ತಿ ಬಂದಿದೆ. ವಾಲ್ಮೀಕಿ ಸಮಾಜವನ್ನು (valmiki community) ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯ ರಕ್ಷಣೆ ಮಾಡಿದ್ದು ವಾಲ್ಮೀಕಿ ಸಮಾಜ. ಹೈದರಾಲಿಗೆ ಪಾಠ ಕಲಿಸಿದ್ದು ಮದಕರಿ ನಾಯಕ. ವಾಲ್ಮೀಕಿ ಅಂದ್ರೆ ಪರಿವರ್ತನೆ. ವಾಲ್ಮೀಕಿ ರಾಮಾಯಣದಲ್ಲಿ ಜೀವನಕ್ರಮ, ಜೀವನಶೈಲಿ ಬಗ್ಗೆ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai) ವಾಲ್ಮೀಕಿ ಸಮಾಜವನ್ನು ಗುಣಗಾನ ಮಾಡಿದರು.

ಇಂದು(ಫೆಬ್ರವರಿ 09) ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ನಾನು ಬಯಸಿ ಸಿಎಂ ಆಗಿಲ್ಲ. ನಿಮ್ಮೆಲ್ಲರ ಹಾರೈಕೆಯಿಂದ ಆಗಿದ್ದೇನೆ. ನಮ್ಮ ನಾಯಕ ನರೇಂದ್ರ ಮೋದಿಯಿಂದ ನಾನು ಸಿಎಂ ಆಗಿದ್ದೇನೆ. ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. ಇದರಿಂದ ಕಲಿಯುಗದಲ್ಲಿ ಇದೊಂದು ಪರಿವರ್ತನೆ ಆಗುತ್ತದೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನೀತಿ ಜಾರಿಗೆ ಬರಲಿದೆ. ಆದೇಶ ಪ್ರತಿ ಸ್ವಾಮೀಜಿಗೆ ತೋರಿಸಿದ್ದೇನೆ. ಮೀಸಲಾತಿ ಹೆಚ್ಚಳ ಬಗ್ಗೆ ಶೆಡ್ಯೂಲ್​9ರಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.

SC, ST ಸಮುದಾಯಕ್ಕೆ 75 ಯೂನಿಟ್​ ಉಚಿತ ವಿದ್ಯುತ್​ ನೀಡುತ್ತಿದ್ದೇವೆ. ಪರಿಶಿಷ್ಟ ಪಂಗಡದ ಮೇಲೆ ಪ್ರಧಾನಿ ಮೋದಿಗೆ ಅಪಾರ ಗೌರವವಿದೆ. ಬುಡಕಟ್ಟು ಸಮುದಾಯದ ಮಹಿಳೆಗೆ ರಾಷ್ಟ್ರಪತಿ ಹುದ್ದೆ ನೀಡಿದ್ದಾರೆ. ನನ್ನ ಉಸಿರಿರುವವರೆಗೂ ವಾಲ್ಮೀಕಿ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದರು.

ಇನ್ನು ಇದೇ ವೇಳೆ ಎಸ್​​ಸಿ, ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ‌ಪುರಿಶ್ರೀ, 151 ಜಾತಿಗಳಿಗೆ ಮೀಸಲಾತಿ ಹೆಚ್ಚಳ ಆಗಿದೆ. ಸಿಎಂ ಬೊಮ್ಮಾಯಿ ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಿಸಿದ್ದಾರೆ. ಮೀಸಲಾತಿ ಹೆಚ್ಚಿಸುವುದು ಜೇನುಗೂಡಿಗೆ ಕಲ್ಲು ಹೊಡೆದಂತೆ. ಸಿಎಂ ಬೊಮ್ಮಾಯಿ ಇಂತಹ ಮಹತ್ವದ ಕೆಲಸ ಮಾಡಿದ್ದಾರೆ. ಕಲ್ಲು ಹೊಡೆದು ಜೇನು ಹುಳುಗಳಿಂದ ಕಚ್ಚಿಸಿಕೊಂಡಿದ್ದು ಸಿಎಂ. ವಾಲ್ಮೀಕಿ ಸಮುದಾಯಕ್ಕೆ ತುಪ್ಪ ಕೊಟ್ಟಿದ್ದಾರೆ. ಸಿಎಂ ಬೊಮ್ಮಾಯಿ ಅಭಿನವ ಬಸವಣ್ಣ ಎಂದು ಹಾಡಿಹೊಗಳಿದರು.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ