ಕೋಟಿ ಕೋಟಿ ಸುರಿದ್ರೂ ಸ್ಮಾರ್ಟ್ ಆಗದ ‘ಬೆಣ್ಣೆ ನಗರಿ’!

ದಾವಣಗೆರೆ: ಎಲ್ಲಾ ಅಂದುಕೊಂಡಂತೆ ನಡೆದಿದ್ರೆ ಮಧ್ಯ ಕರ್ನಾಟಕದ ಜನರಿಗೆ ಆ ನಗರ ಎಲ್ಲಾ ಸೌಕರ್ಯಗಳನ್ನ ಒದಗಿಸಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ಎಡವಟ್ಟಿನಿಂದ ಪರಿಸ್ಥಿತಿ ಬೇರೆಯದ್ದೇ ರೂಪ ಪಡೆದಿದೆ. ಕೋಟಿ ಕೋಟಿ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ. ಸುಂದರವಾಗಿರೋ ಸಿಮೆಂಟ್ ರಸ್ತೆ ಅಗೆಯುತ್ತಿರೋ ಯಂತ್ರಗಳು. ಇನ್ನೊಂದ್ಕಡೆ ಸಂಚರಿಸಲು ಪರದಾಡ್ತಿರೋ ಸವಾರರು. ಅಂದಹಾಗೆ ಎಲ್ಲಾ ಅಂದುಕೊಂಡಂತೆ ನಡೆದಿದ್ರೆ ಇವತ್ತು ಈ ನಗರ ಸ್ಮಾರ್ಟ್ ಸಿಟಿ ಆಗಿರಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಎಡವಟ್ಟಿನಿಂದಾಗಿ ಜನ ಹೀಗೆ […]

ಕೋಟಿ ಕೋಟಿ ಸುರಿದ್ರೂ ಸ್ಮಾರ್ಟ್ ಆಗದ ‘ಬೆಣ್ಣೆ ನಗರಿ’!
Follow us
ಸಾಧು ಶ್ರೀನಾಥ್​
|

Updated on: Jan 14, 2020 | 12:45 PM

ದಾವಣಗೆರೆ: ಎಲ್ಲಾ ಅಂದುಕೊಂಡಂತೆ ನಡೆದಿದ್ರೆ ಮಧ್ಯ ಕರ್ನಾಟಕದ ಜನರಿಗೆ ಆ ನಗರ ಎಲ್ಲಾ ಸೌಕರ್ಯಗಳನ್ನ ಒದಗಿಸಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ಎಡವಟ್ಟಿನಿಂದ ಪರಿಸ್ಥಿತಿ ಬೇರೆಯದ್ದೇ ರೂಪ ಪಡೆದಿದೆ. ಕೋಟಿ ಕೋಟಿ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ.

ಸುಂದರವಾಗಿರೋ ಸಿಮೆಂಟ್ ರಸ್ತೆ ಅಗೆಯುತ್ತಿರೋ ಯಂತ್ರಗಳು. ಇನ್ನೊಂದ್ಕಡೆ ಸಂಚರಿಸಲು ಪರದಾಡ್ತಿರೋ ಸವಾರರು. ಅಂದಹಾಗೆ ಎಲ್ಲಾ ಅಂದುಕೊಂಡಂತೆ ನಡೆದಿದ್ರೆ ಇವತ್ತು ಈ ನಗರ ಸ್ಮಾರ್ಟ್ ಸಿಟಿ ಆಗಿರಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಎಡವಟ್ಟಿನಿಂದಾಗಿ ಜನ ಹೀಗೆ ಪರದಾಡುವಂತಾಗಿದೆ.

ಕೋಟಿ ಕೋಟಿ ಖರ್ಚು ಮಾಡಿದ್ದ ರಸ್ತೆ ಉಡೀಸ್! ಹೌದು ದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೆ ಬಂದಾಗ ರಾಜ್ಯದಿಂದ ಆಯ್ಕೆಯಾದ ಕೆಲವೇ ನಗರಗಳ ಪೈಕಿ ದಾವಣಗೆರೆ ಕೂಡ ಒಂದು. ನಗರವನ್ನ ಹೈಟೆಕ್ ಸಿಟಿಯಾಗಿ ರೂಪುಗೊಳಿಸಲು ಯೋಜನೆ ಸಿದ್ಧವಾಗಿತ್ತು. ಆದರೆ ಗುತ್ತಿಗೆದಾರರ ಎಡವಟ್ಟಿನಿಂದ ಇವತ್ತು ಬೆಣ್ಣೆ ನಗರಿಯ ನಿವಾಸಿಗಳು ನರಳಾಡುವಂತಾಗಿದೆ. ಕೋಟ್ಯಂತರ ರೂಪಾಯಿ‌ ಖರ್ಚು ಮಾಡಿ ನಿರ್ಮಿಸಿದ್ದ ಸಿಮೆಂಟ್ ರಸ್ತೆಗಳನ್ನ ಕಿತ್ತು ಚರಂಡಿ ನಿರ್ಮಿಸ್ತಿದ್ದಾರೆ. ಹೀಗಾಗಿ ದಾವಣಗೆರೆಯ ಪ್ರಮುಖ ರಸ್ತೆಗಳೆಲ್ಲಾ ಗುಂಡಿಮಯವಾಗಿದ್ದು, ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ.

ಪಿ.ಬಿ.ರಸ್ತೆ ಸೇರಿದಂತೆ ಹಲವೆಡೆ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಕೆ-ಶಿಪ್ ಯೋಜನೆ ರೂಪುಗೊಂಡಿತ್ತು. ಆದ್ರೆ ಕಾಮಗಾರಿ ಸರಿಯಾಗಿ ನಡೆಯದೆ ನೀರು ಹೋಗಲು ನಿರ್ಮಿಸಿದ್ದ ಒಳಚರಂಡಿ ವ್ಯವಸ್ಥೆಯನ್ನೇ ಹಾಳು ಮಾಡಿದ್ರಿಂದ ಸಾಕಷ್ಟು ಸಮಸ್ಯೆಯಾಗಿತ್ತು. ಹೀಗಾಗಿ ಚರಂಡಿ ವ್ಯವಸ್ಥೆ ಸರಿಪಡಿಸಲು ರಸ್ತೆ ಅಗೆಯಲಾಗಿದೆ. ಇನ್ನು ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗಿರೋ ಗುತ್ತಿಗೆ ಪಡೆದಿದ್ದ ಕಂಪನಿಗೆ ಲಕ್ಷ ಲಕ್ಷ ದಂಡವನ್ನೂ ವಿಧಿಸಲಾಗಿದೆಯಂತೆ.

ಒಟ್ನಲ್ಲಿ ಯಾರೋ ಮಾಡಿದ ತಪ್ಪಿನಿಂದ ಸವಾರರು ಪರದಾಡುವಂತಾಗಿದೆ. ತೆರಿಗೆ ಹಣ ಸುರಿದು ನಿರ್ಮಾಣ ಮಾಡಿದ್ದ ರಸ್ತೆಗಳನ್ನ ಅನಿವಾರ್ಯವಾಗಿ ಕಿತ್ತುಹಾಕಲಾಗ್ತಿದೆ. ಇನ್ನು ಮುಂದೆಯಾದ್ರು ಕಾಮಾಗಾರಿ ಕೈಗೊಳ್ಳುವ ಮುನ್ನ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಒಂದಷ್ಟು ಹಿಂದು-ಮುಂದು ನೋಡುವುದು ಒಳಿತು.

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ