ಪಾಕ್​​​​ ಸಂಘಟನೆಗಳ ಜೊತೆ ನಂಟು, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್!

Davanagere News: ದಾವಣಗೆರೆ ಮೂಲದ ಜಮೀರ್ ಖಾನ್ ಹಾ ಅಲ್ಲಾಭಕ್ಷಿ ಎನ್ನುವರನ್ನು ತುಮಕೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಇದೀಗ ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನವಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದೆ. ಹಾಗಾದ್ರೆ, ಬಂಧಿತ ಯಾರು? ಎಲ್ಲಿಯವನು? ಏನು ಮಾಡುತ್ತಿದ್ದ ಎನ್ನುವ ಡಿಟೇಲ್ಸ್ ಇಲ್ಲಿದೆ.

ಪಾಕ್​​​​ ಸಂಘಟನೆಗಳ ಜೊತೆ ನಂಟು, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್!
ಸಾಂದರ್ಭಿಕ ಚಿತ್ರ
Image Credit source: Getty Images
Edited By:

Updated on: Jun 23, 2026 | 5:55 PM

ದಾವಣಗೆರೆ, (ಜೂನ್ 23): ಬೆಣ್ಣೆನಗರಿ ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿದೆ. ಪಾಕಿಸ್ತಾನ ಉಗ್ರ ಸಂಘಟನೆಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಸುಯೇಲ್ (20) ಬಂಧಿತ ಶಂಕಿತ ಉಗ್ರ. ಹರಿಹರದ ಪಕ್ಕದಲ್ಲಿರುವ ಕಾರ್ಖಾನೆಯೊಂದಕ್ಕೆ‌ ಕೆಲಸಕ್ಕೆ ಬಂದಿದ್ದ ಸುಯೇಲ್, ಇನ್ಟಾಗ್ರಾಂ ನಲ್ಲಿ ಪಾಕಿಸ್ತಾನದ ಉಗ್ರರ ಜೊತೆ ನಿರಂತರವಾಗಿ ಸಂಪರ್ಕ ದಲ್ಲಿ ಇದ್ದ ಎನ್ನಲಾಗಿದೆ. ಸುಯೇಲ್ ಕಾರ್ಯಚಟುವಟಿಕೆಗಳ ಮೇಲೆ ನಿಗಾವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆ, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡದೊಂದಿಗೆ ಕಾರ್ಯಚರಣೆ ನಡೆಸಿ ಬಂಧಿಸಿದೆ.

ಮುಖ್ಯಾಂಶಗಳು

  • ದಾವಣಗೆರೆ ಜಿಲ್ಲೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ
  • ಹರಿಹರ ನಗರದಲ್ಲಿ ವಾಸವಿದ್ದ ಯುಪಿ ಮೂಲದ ಸುಹೇಲ್(20) ಅರೆಸ್ಟ್‌
  • ಇನ್ಸ್ಟಾಗ್ರಾಂನಲ್ಲಿ  ಪಾಕಿಸ್ತಾನ ಉಗ್ರ ಸಂಘಟನೆಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ
  • ಹರಿಹರ ಬಳಿಯ ಕಾರ್ಖಾನೆಯೊಂದಕ್ಕೆ‌ ಕೆಲಸಕ್ಕೆ ಬಂದಿದ್ದ ಸುಹೇಲ್

ಕಳೆದ ಒಂದು ತಿಂಗಳ ಹಿಂದೆ ತುಮಕೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ದಾವಣಗೆರೆ ಮೂಲದ ಜಮೀರ್ ಖಾನ್ ಹಾಗೂ ಅಲ್ಲಾಭಕ್ಷಿ ಎನ್ನುವರನ್ನು ಬಂಧನ ಮಾಡಿದ್ದರು. ಅದೇ ಪ್ರಕರಣ ಜಾಡು ಹಿಡಿದು ಮತ್ತೊಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಉಗ್ರರ ಜೊತೆ ನಂಟು ಹೊಂದಿದ್ದ ಎನ್ನಲಾಗಿದ್ದು, ಈ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಈಗಾಗಲೇ ಇಬ್ಬರು ಶಂಕತ ಉಗ್ರರ ಬಂಧನ

ಭಾರತದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ನೊಂದಿಗೆ ಸಂಪರ್ಕದಲ್ಲಿದ್ದ ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ ಇಬ್ಬರು ಯುವಕರನ್ನು ಉಗ್ರ ನಿಗ್ರಹ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು.ಇವರಿಬ್ಬರು ಕಳೆದ ಕೇವಲ 20 ದಿನಗಳಿಂದ ರಾಣಾ ಉನೇನ್ ನ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us