AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆ ರದ್ದು

ಕೊವಿಡ್ ನಿಯಮ ಕಾಪಾಡುವುದು ಎಲ್ಲರ ಕರ್ತವ್ಯ ಹೀಗಾಗಿ ಜನವರಿ 14, 15 ರಂದು ಮನೆಯಲ್ಲಿ ರುದ್ರಾಕ್ಷಿ ಹಿಡಿದು ಹರ ಜಪ ಮಾಡಲಾಗುವುದು ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ದಾವಣಗೆರೆ: ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆ ರದ್ದು
ವಚನಾನಂದ ಸ್ವಾಮೀಜಿ
TV9 Web
| Updated By: preethi shettigar|

Updated on:Jan 10, 2022 | 5:50 PM

Share

ದಾವಣಗೆರೆ: ಕೊವಿಡ್ ಭೀತಿ ಹಿನ್ನಲೆ ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಆಗಮಿಸಬೇಕಿದ್ದ ಜಾತ್ರೆಯನ್ನು ಉಪರಾಷ್ಟ್ರಪತಿಯವರ ಮನವಿ ಮೇರೆಗೆ ಮುಂದೂಡಲಾಗಿದೆ. ಕೊವಿಡ್ ನಿಯಮ ಕಾಪಾಡುವುದು ಎಲ್ಲರ ಕರ್ತವ್ಯ ಹೀಗಾಗಿ ಜನವರಿ 14, 15 ರಂದು ಮನೆಯಲ್ಲಿ ರುದ್ರಾಕ್ಷಿ ಹಿಡಿದು ಹರ ಜಪ ಮಾಡಲಾಗುವುದು ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಸಾರ್ವಜನಿಕರಲ್ಲಿ ಪಾಸಿಟಿವಿಟಿ ರೇಟ್​ ಕಂಡು ಜನರಲ್ಲಿ ಆತಂಕ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ದಕ್ಷಿಣ ವಲಯದಲ್ಲಿ ಹೆಚ್ಚು ಜನರು ಕೊವಿಡ್​ ಪರೀಕ್ಷೆಗೆ ಆಗಮಿಸುತ್ತಿದ್ದಾರೆ.  ಆರ್​ಎಟಿ ಟೆಸ್ಟ್​ ಮಾಡಿಸಿದ್ದ 44 ಜನರ ಪೈಕಿ 12 ಜನರಿಗೆ ಪಾಸಿಟಿವ್ ಆಗಿದೆ ಎಂದು ಆರೋಗ್ಯ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ದಕ್ಷಿಣ ವಲಯ ಜೊನ್​ನಲ್ಲಿ ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ ಆಡುಗುಡಿ 52, ಬಿಟಿಎಂ ಲೇಔಟ್ 52, ಈಜಿಪುರ 55, ಜಕ್ಕಸಂದ್ರ 20, ಕೋರಮಂಗಲ 113, ಲಕ್ಕಸಂದ್ರ 14, ಮತ್ತು ಇನ್ನಿತರ 14. ಹೀಗೆ ಒಟ್ಟು 425 ಕೇಸ್​ಗಳು ಪತ್ತೆ ಆಗಿವೆ.

ಚಾಮರಾಜನಗರ: ಓಂ ಶಕ್ತಿಗೆ ಹೋಗಿಬಂದಿದ್ದ 17 ಜನರಿಗೆ ಕೊರೊನಾ ಪಾಸಿಟಿವ್ ಚಾಮರಾಜನಗರ ಜಿಲ್ಲೆಯಲ್ಲಿ 17 ಜನರಿಗೆ ಕೊವಿಡ್​ ಸೋಂಕು ದೃಢಪಟ್ಟಿದೆ.​ ಓಂ ಶಕ್ತಿಗೆ ಹೋಗಿಬಂದಿದ್ದ 17 ಭಕ್ತರಿಗೆ ಪಾಸಿಟಿವ್ ಬಂದಿದ್ದರಿಂದ ಜನರಲ್ಲಿ ಭೀತಿ ಎದುರಾಗಿದೆ. ಹನೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಪಾಸಿಟಿವ್​ ಬಂದಿದೆ.​ ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ: ಸರ್ಕಾರಕ್ಕೆ ಲೈಫ್​ಲೈನ್ ನೀಡಿದ್ದೇವೆ ಎಂದ ವಚನಾನಂದ ಸ್ವಾಮೀಜಿ

ರಾತ್ರಿ 10ಗಂಟೆವರೆಗೂ ಕೊವಿಡ್ 19 ಲಸಿಕೆ ನೀಡಬಹುದು; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಕೇಂದ್ರ ಸರ್ಕಾರದ ಸೂಚನೆ

Published On - 4:56 pm, Mon, 10 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ