ಪೋಕ್ಸೋ ಕೇಸ್​​: ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್​​ನಿಂದ ವಚನಾನಂದ ಶ್ರೀಗೆ ಜಾಮೀನು ಮಂಜೂರು

Vachanananda Swamiji: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಸೂಚನೆ ಬೆನ್ನಲ್ಲೇ ಶ್ರೀಗಳು ರೆಗ್ಯುಲರ್ ಬೇಲ್ ಪಡೆದುಕೊಂಡಿದ್ದಾರೆ. ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ‌ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ಮೇಲಿದೆ.

ಪೋಕ್ಸೋ ಕೇಸ್​​: ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್​​ನಿಂದ ವಚನಾನಂದ ಶ್ರೀಗೆ ಜಾಮೀನು ಮಂಜೂರು
ವಚನಾನಂದ ಸ್ವಾಮೀಜಿ
Edited By:

Updated on: Jul 13, 2026 | 3:57 PM

ಮುಖ್ಯಾಂಶಗಳು

  • ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಕೊಂಚ ರಿಲೀಫ್​​
  • ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ನಿಂದ ಜಾಮೀನು
  • ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಆದೇಶ

ದಾವಣಗೆರೆ, ಜುಲೈ 13: ಪೋಕ್ಸೋ ಕೇಸ್ ಸಂಬಂಧ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಕೊಂಚ ರಿಲೀಫ್​​ ಸಿಕ್ಕಿದ್ದು, ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಈ ಸಂಬಂಧ ಆದೇಶ ನೀಡಿದ್ದಾರೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀ ಅಜರ್ಜ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ನೀಡಿದೆ.

ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ‌ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ಮೇಲಿದೆ. ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಮತ್ತು ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ್ ವಾದ ಮಂಡನೆ ಮಾಡಿದ್ದರು. ಆ ಬಳಿಕ ವಚನಾನಂದಶ್ರೀಗೆ ಜಾಮೀನು ಸಂಬಂಧ ಅಂತಿಮ ತೀರ್ಪನ್ನು ಇಂದಿಗೆ ಕಾಯ್ದಿರಿಸಿರೋದಾಗಿ ಜುಲೈ 6ರಂದು ವಿಶೇಷ ಪೋಕ್ಸೋ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೊಟ್ಟ ವಿಧಾನ ಸರಿಯಲ್ಲ; ವಚನಾನಂದ ಸ್ವಾಮೀಜಿಗೆ ಹೈಕೋರ್ಟ್​ ಬಿಗ್ ಶಾಕ್

ಸ್ವಾಮೀಜಿಗೆ ಶಾಕ್​​ ಕೊಟ್ಟಿದ್ದ ಹೈಕೋರ್ಟ್​​

ಪೋಕ್ಸೋ ಪ್ರಕರಣಕ್ಕೆ ರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಈ ಹಿಂದೆ ಬಿಗ್ ಶಾಕ್ ಕೊಟ್ಟಿತ್ತು. ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್​ ಮೆಟ್ಟಿಲೇರಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​​, ಕೇಸ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೆ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿ ನ್ಯಾಯಮೂರ್ತಿ ಎಂ‌.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿತ್ತು. ಹೀಗಿದ್ದರೂ ರೆಗ್ಯುಲರ್ ಬೇಲ್​​ಗೆ ಅರ್ಜಿ ಸಲ್ಲಿಸಲು ಸ್ವಾಮೀಜಿಗೆ 3 ವಾರಗಳ ಕಾಲಾವಕಾಶ ನೀಡಿ, ಅಲ್ಲಿಯವರೆಗೂ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಕೆಗೆ ಕೋರ್ಟ್​​ ಸೂಚಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:53 pm, Mon, 13 July 26

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us