Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಅಡಿಕೆ ಮರ ಕಡಿದ ದುಷ್ಕರ್ಮಿಗಳು; ದೂರು ನೀಡಿದರೂ ಕ್ರಮ ಕೈಗೊಳ್ಳದೆ ಪೊಲೀಸರ ನಿರ್ಲಕ್ಷ್ಯ

ರುದ್ರೇಶ್ ಎಂಬುವವರ ತೋಟದಲ್ಲಿ ಅಡಿಕೆ ಮರ ಕಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮಕೈಗೊಳ್ಳುವಲ್ಲಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ದಾವಣಗೆರೆ ಎಸ್‌ಪಿಗೆ ದೂರು ನೀಡಲು ರುದ್ರೇಶ್ ತೀರ್ಮಾನ ಮಾಡಿದ್ದಾರೆ.

35 ಅಡಿಕೆ ಮರ ಕಡಿದ ದುಷ್ಕರ್ಮಿಗಳು; ದೂರು ನೀಡಿದರೂ ಕ್ರಮ ಕೈಗೊಳ್ಳದೆ ಪೊಲೀಸರ ನಿರ್ಲಕ್ಷ್ಯ
35 ಅಡಕೆ ಮರ ಕಡಿದ ದುಷ್ಕರ್ಮಿಗಳು
Follow us
TV9 Web
| Updated By: preethi shettigar

Updated on: Aug 23, 2021 | 12:42 PM

ದಾವಣಗೆರೆ: 35 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಕೊಗಲೂರು ಬಳಿ ನಡೆದಿದೆ. ಹಿರೇಕೊಗಲೂರಿನ ರುದ್ರೇಶ್‌ಗೆ ಸೇರಿದ ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಹತ್ತು ಹಾಗೂ ಮತ್ತೆ ಇಂದು 35 ಫಲ ನೀಡುವ ಹಂತದಲ್ಲಿದ್ದ ಅಡಿಕೆ ಮರಗಳನ್ನು ಕಡಿದಿದ್ದಾರೆ.

6 ಜನರ ವಿರುದ್ಧ ಆರೋಪಿಸಿ ಹಿರೇಕೊಗಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರುದ್ರೇಶ್‌ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ರುದ್ರೇಶ್ ಎಂಬುವವರ ತೋಟದಲ್ಲಿ ಅಡಿಕೆ ಮರ ಕಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮಕೈಗೊಳ್ಳುವಲ್ಲಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ದಾವಣಗೆರೆ ಎಸ್‌ಪಿಗೆ ದೂರು ನೀಡಲು ರುದ್ರೇಶ್ ತೀರ್ಮಾನ ಮಾಡಿದ್ದಾರೆ.

ಮಂಗಳೂರು: ಉಪ್ಪಿನಂಗಡಿಯಲ್ಲಿ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ತಡರಾತ್ರಿ ಕಿಡಿಗೇಡಿಗಳು ಮೀನಿನ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೀನು ಸಂಗ್ರಹದ ಬಾಕ್ಸ್ ಸೇರಿದಂತೆ ಅಂಗಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚಲು ಕಾರಣವೇನು? ಎಂಬುದು ತಿಳಿದುಬರಬೇಕಿದೆ.

ಅಶೋಕ್ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಇಂದು ಬೆಳಿಗ್ಗೆ (ಆಗಸ್ಟ್ 23) ಆಗಮಿಸಿ, ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಹೈದರಾಬಾದ್​ನಲ್ಲಿ ಅಗ್ನಿ ಅವಗಡ ಹೈದರಾಬಾದ್​ನ ರಂಗರೆಡ್ಡಿ ಜಿಲ್ಲಾ ರಾಜೇಂದ್ರನಗರದಲ್ಲಿ ಅಗ್ನಿ ಅವಗಡ ಸಂಭವಿಸಿದೆ. ಇಂಡಸ್ಟ್ರಿವೊಂದರಲ್ಲಿ ಅಗ್ನಿ ಅವಗಡವಾಗಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿದೆ. ವಿನಾಯಕ ಸ್ಪಾಂಜ್ ಕಂಪನಿ ಹಾಗೂ ದಾನಮ್ಮ ಪ್ಲಾಸ್ಟಿಕ್ ಕಂಪನಿಯಲ್ಲಿ ಅರ್ಧ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಅರ್ಧರಾತ್ರಿ ವೇಳೆ ನಡೆದ ಅವಗಡದಿಂದಾಗಿ ಪ್ರಾಣ ಹಾನಿ ತಪ್ಪಿದೆ. ಆದರೆ ಭಾರಿ ಪ್ರಮಾಣದ ನಷ್ಟವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ:

ದಾವಣಗೆರೆಯ ರೈತರಿಗೆ ಸೇರಿದ 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಪರಾರಿಯಾದ ದುಷ್ಕರ್ಮಿಗಳು

ರಸ್ತೆ ಅಗಲೀಕರಣದ ನೆಪದಲ್ಲಿ ನೂರಾರು ಮರಗಳ ಹನನ; ಬೀದರ್ ಜಿಲ್ಲೆಯ ರೈತರಿಂದ ಆಕ್ರೋಶ

Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ