ದಾವಣಗೆರೆ: ಅರಕೆರೆಯಲ್ಲಿ ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವು
ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಮುಂಜಾನೆ ಮನೆಯಿಂದ ಹೊರಬಂದಾಗ ಮಂಗಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತದಾರೂ ಮೃತಪಟ್ಟಿದ್ದಾರೆ.

ದಾವಣಗೆರೆ, ನ.13: ಮಂಗಗಳ ದಾಳಿಗೆ (Monkeys Attack) ಪಿಎಲ್ಡಿ ಬ್ಯಾಂಕ್ (PLD Bank) ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗುತ್ತೆಪ್ಪ (60) ಮೃತ ದುರ್ದೈವಿ. ಗುತ್ತೆಪ್ಪ ಅವರು ಇಂದು ಮುಂಜಾನೆ ಮನೆಯಿಂದ ಹೊರಬಂದಾಗ ಏಕಾಏಕಿಯಾಗಿ ಮಂಗಗಳು ದಾಳಿ ನಡೆಸಿವೆ.
ಮಂಗಗಳ ದಾಳಿಯಿಂದ ಗುತ್ತೆಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಗುತ್ತೆಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಮಂಗಗಳ ದಾಳಿಗೆ ಈರುಳ್ಳಿ ಬೆಳೆ ನಾಶ: ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ
ಇದೇ ವೇಳೆ ಸ್ಥಳೀಯರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರಿಗೆ ಅರಕೆರೆ ಗ್ರಾಮದಲ್ಲಿ ಕರಡಿ, ಚಿರತೆ, ಮಂಗಗಳ ಕಾಟದ ಬಗ್ಗೆ ಮಾಹಿತಿ ನೀಡಲಾಯಿತು. ಅದರಂತೆ, ಅರಣ್ಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ರೇಣುಕಾಚಾರ್ಯ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ