ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್​; ತಪ್ಪಿದ ಭಾರಿ ದುರಂತ

| Updated By: ganapathi bhat

Updated on: Dec 22, 2021 | 3:04 PM

ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್​; ತಪ್ಪಿದ ಭಾರಿ ದುರಂತ
ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಿದ್ದ ಬಸ್
Follow us on

ದಾವಣಗೆರೆ: ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿಯಾಗಿ ಅಡಕೆ ತೋಟಕ್ಕೆ ಬಸ್​ ಬಿದ್ದ ದುರ್ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಬಳಿ ನಡೆದಿದೆ. ಎದುರಿಗೆ ಬಂದ ಬೈಕ್​ಗೆ ದಾರಿ ಬಿಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20 ಜನರಿಗೆ ಗಾಯ ಆಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣು
ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾದ ದುರ್ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಶೆಡ್​​ನಲ್ಲಿ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲತವಾಡ ಪಟ್ಟಣ ನಿವಾಸಿ ಅಮರಪ್ಪ ಗಂಗನಗೌಡ ಆತ್ಮಹತ್ಯೆ ಮಾಡಿಕೊಂಡ ರೈತ. ವಿವಿಧ ಬ್ಯಾಂಕ್ ಹಾಗೂ ಖಾಸಗಿಯಾಗಿ 2.75 ಲಕ್ಷ ಸಾಲ ಮಾಡಿದ್ದ ರೈತ ಸಾಲ ಮರುಪಾವತಿ ಮಾಡಲಾಗದ್ದಕ್ಕೆ ನೇಣಿಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು, ಕಂದಾಯ ಇಲಾಖೆ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರದ ವಿವೇಕನಗರದಲ್ಲಿ ನಡೆದಿದೆ. ರೂಪಾ ಇಂಚಗೇರಿ ಎಂಬವರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಹಲ್ಲೆ ಬಳಿಕ ಕಿಡ್ನ್ಯಾಪ್ ಮಾಡಲು ಯತ್ನ ಆರೋಪವೂ ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಅವಧಿ ಮೀರಿದ 9.90 ಲಕ್ಷ ರೂ. ಮೌಲ್ಯದ ಮದ್ಯ ನಾಶ

ಇದನ್ನೂ ಓದಿ: ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 95 ಮಕ್ಕಳು ಅಸ್ವಸ್ಥ; ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 2:57 pm, Wed, 22 December 21