ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ವಿಚಿತ್ರ ಅರ್ಚಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಜನರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ದೇವರ ತಲೆ ಮೇಲೆ ಪಾದವಿಟ್ಟು ದೇವರಿಗೆ ಜಲಾಭಿಷೇಕ ಮಾಡಿದ ವಿಡಿಯೋ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ವಿಚಿತ್ರ ಅರ್ಚಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಜನರ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ದೃಶ್ಯಗಳು
Updated By: ಆಯೇಷಾ ಬಾನು

Updated on: Oct 23, 2022 | 8:23 AM

ದಾವಣಗೆರೆ: ಪ್ರತಿ ನಿತ್ಯ ದೇವರ ಪೂಜೆ ಮಾಡುವಾಗ ಅದರದೇ ಆದ ಕೆಲವು ನೀತಿ-ನಿಯಮಗಳನ್ನು ಪಾಲಿಸಬೇಕಾಗುತ್ತೆ. ಇದು ಯಾವುದೇ ದೇವರು ಮಾಡಿದ ರೂಲ್ಸ್ ಅಲ್ಲ. ಆದ್ರೆ ಮಾಡುವ ಕೆಲಸದಲ್ಲಿ ಶಿಸ್ತು, ಶ್ರದ್ಧೆ ಮುಖ್ಯ ಎಂಬುವುದಷ್ಟೇ. ಇಲ್ಲೊಬ್ಬ ಅರ್ಚಕ ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಶಾಸಕ ಎಂ‌ಪಿ. ರೇಣುಕಾಚಾರ್ಯ ಕ್ಷೇತ್ರ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ವಿಚಿತ್ರ ಪೂಜೆಯಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೇಡರ ಕಣ್ಣಪ್ಪ ಶಿವನಿಗೆ ಒಂದು ಕಣ್ಣು ದಾನ ಕೊಟ್ಟು ಇನ್ನೊಂದು ಕಣ್ಣು ಕೊಡಲು ಶಿವಲಿಂಗದ ಮೇಲೆ ಕಾಲಿಡುವಂತೆ ಈ ಅರ್ಚಕ ಮಹೇಶ್ವರಯ್ಯ, ಆಂಜನೇಯ ಸ್ವಾಮೀ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಾರೆ. ಅರ್ಚಕನ ಪೂಜೆ ವಿಧಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಅರ್ಚಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹಾರಾಡುತ್ತಾ ಕನ್ನಡ ಧ್ವಜ?

Published On - 7:51 am, Sun, 23 October 22