ದಾವಣಗೆರೆ: ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಇಂದು(ಅಕ್ಟೋಬರ್ 16) ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಉದ್ಘಾಟಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಹಿನ್ನೆಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮಕ್ಕೆ ಎತ್ತಿನ ಚಕ್ಕಡಿಯಲ್ಲಿ ಸಚಿವ ಆರ್. ಅಶೋಕ ಪ್ರವೇಶ ಮಾಡಿದ್ದಾರೆ. ಸುರಹೊನ್ನೆ ಗ್ರಾಮಸ್ಥರಿಂದ ಮೆರವಣಿಗೆ ಎರ್ಪಡಿಸಲಾಗಿದ್ದು, ಸಚಿವರು ಎತ್ತಿನ ಚಕ್ಕಡಿಯಲ್ಲಿ ಆಗಮಿಸಿದ್ದಾರೆ.
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಿನ್ನೆಲೆ ವೇದಿಕೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ, ಕೆ.ಎಸ್. ಈಶ್ವರಪ್ಪ ಸಂಸದ ಜಿ.ಎಂ.ಸಿದ್ದೇಶ್ವರ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಪ್ರೊ. ಲಿಂಗಣ್ಣ, ಎಂಎಲ್ಸಿ ಆಯನೂರ ಮಂಜುನಾಥ ಸೇರಿದಂತೆ ಪ್ರಮುಖರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಎಂ ಪಾಲ್ಗೊಂಡ ಸರ್ಕಾರಿ ಕಾರ್ಯಕ್ರಮದ ವೇದಿಕೆ ಮೇಲೆ ಶಾಸಕ ಎಂ.ಪಿ.ರೇಣುಕಾಚಾರ್ಯ, ಪತ್ನಿ ಸುಮಾ ರೇಣುಕಾಚಾರ್ಯ. ಜೊತೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಉಪಸ್ಥಿತರಿದ್ದರು.
ಹಳ್ಳಿಯ ಅಂಗನವಾಡಿ ಕೇಂದ್ರಗಳಲ್ಲಿಯೇ ಊಟ ಮಾಡಬೇಕು: ಆರ್. ಅಶೋಕ್
ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಆರ್. ಅಶೋಕ್ ಮಾತನಾಡಿದ್ದು, ಹಳ್ಳಿಯ ಅಂಗನವಾಡಿ ಕೇಂದ್ರಗಳಲ್ಲಿಯೇ ಊಟ ಮಾಡಬೇಕು. ಸಿಎಂ ರೈತರ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಕೊವಿಡ್ ವೇಳೆ ಸರ್ಕಾರ 1460 ಕೋಟಿ ರೂ. ವೆಚ್ಚ ಮಾಡಿದೆ ಎಂದು ಹೇಳಿದ್ದಾರೆ.
37 ಸಾವಿರ ಜನ ಕೊವಿಡ್ಗೆ ರಾಜ್ಯದಲ್ಲಿ ಬಲಿಯಾಗಿದ್ದಾರೆ. ಕೊವಿಡ್ಗೆ ಸಾವನ್ನಪ್ಪಿದವರಿಗೆ ಒಂದೂವರೆ ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ರಾಜ್ಯದಲ್ಲಿ 923 ತಾಂಡಾ, ಹಟ್ಟಿಗಳನ್ನು ಕಂದಾಯ ಗ್ರಾಮ ಎಂದು ಈಗಾಗಲೇ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸುರಹೊನ್ನೆ ಗ್ರಾಮದಲ್ಲಿ ಕಂದಾಯ ಸಚಿವ ಅಶೋಕ್ ಹೇಳಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಯಾರೋ ಸ್ಥಿತಿವಂತರ ಮನೆಯಲ್ಲಿ ಊಟ ಮಾಡುವಂತಿಲ್ಲ. ಇದು ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಎಂಬ ಗ್ರಾಮ ವಾಸ್ತವ್ಯದ ಉದ್ದೇಶ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ
ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸದ್ಯ ಮೈಸೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಸುರಹೊನ್ನೆ ಗ್ರಾಮಕ್ಕೆ ಸಿಎಂ ಪ್ರಯಾಣಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಿಎಂ ಉದ್ಘಾಟಿಸಲಿದ್ದಾರೆ. ನಂತರ ಕುಂದೂರಿಗೆ ಸಿಎಂ ಬೊಮ್ಮಾಯಿ ಆಗಮಿಸಲಿದ್ದು, ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ:
ಕಲಬುರಗಿ: ಗ್ರಾಮ ವಾಸ್ತವ್ಯ ಯೋಜನೆಯಡಿ ಹಳ್ಳಿಗಳಿಗೆ ಭೇಟಿ; ಕ್ರೈಂ ತಡೆಗಟ್ಟಲು ಪೊಲೀಸರಿಂದ ವಿನೂತನ ಪ್ರಯೋಗ
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ವಾಸ್ತವ್ಯ
Published On - 1:13 pm, Sat, 16 October 21