Siddaramotsava: ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ; ರಾಹುಲ್​ ಗಾಂಧಿ ವಾಗ್ದಾಳಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ಸಿದ್ದರಾಮೋತ್ಸವದಲ್ಲಿ ಹೇಳಿದ್ದಾರೆ.

Siddaramotsava: ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ; ರಾಹುಲ್​ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 03, 2022 | 4:50 PM

ದಾವಣಗೆರೆ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಆಡಳಿತ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್​ ಗಾಂಧಿ (Rahul Gandhi) ಅವರು ಸಿದ್ದರಾಮೋತ್ಸವದಲ್ಲಿ (Siddaramotsava) ಹೇಳಿದ್ದಾರೆ. ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ನಿಮಿತ್ತ ದಾವಣಗೆರೆಯಲ್ಲಿ ಇಂದು (ಆಗಸ್ಟ್ 3, ಬುಧವಾರ) ನಡೆಯುತ್ತಿರುವ ಸಿದ್ದರಾಮೋತ್ಸವದಲ್ಲಿ  ಮಾತನಾಡಿದ ಅವರು  ಕರ್ನಾಟಕದ ಬಡವರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ನಾವು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇದನ್ನು ಕಾಣಲು ಆಗಲ್ಲ. ಬಿಜೆಪಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ. ಬಸವ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಇವತ್ತಿನ ಹಿಂಸಾಚಾರ ಎಂದೂ ಅನುಭವಿಸಿಲ್ಲ. ಅಮೆರಿಕದಲ್ಲೂ ಕರ್ನಾಟಕದಲ್ಲಿನ ಇವತ್ತಿನ ಹಿಂಸಾಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಸರ್ವಧರ್ಮ ಸಾಮರಸ್ಯ ಇವತ್ತು ಕಾಣುತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಶಾಂತಿ, ಸಮನ್ವಯತೆ ವಾತಾವರಣ ಇತ್ತು ಎಂದು ಹೇಳಿದರು.

ಲೂಟಿ ಮಾಡಿ ಅಂತಾ ಬಸವಣ್ಣನವರು ಎಲ್ಲಿ ಹೇಳಿದ್ದಾರಾ?  ಪ್ರಾಮಾಣಿಕತೆ ಮೂಲ ತತ್ವದ ಬಗ್ಗೆ ವಿಶ್ವಗುರು ಬಸವಣ್ಣನವರು ಹೇಳಿದ್ದಾರೆ. ಆದರೆ ಬಸವಣ್ಣ ಮೂಲತತ್ವಕ್ಕೆ ಬಿಜೆಪಿ ವಿರೋಧವಾಗಿದೆ.  ಬಿಜೆಪಿ ವಸಾಹತು ಆಡಳಿತ ಮಾಡಲು ಯತ್ನಿಸಿಸುತ್ತಿದೆ. ಬಡವರ ಏಳಿಗೆಗೆ ಕೆಲಸ ಮಾಡುವುದೇ ಕಾಂಗ್ರೆಸ್ ಗುರಿಯಾಗಿದೆ. ಅನ್ನಭಾಗ್ಯ, ಕೃಷಿಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನು ಜನ ಮರೆತಿಲ್ಲ ಎಂದರು.

ಇಂದಿರಾ ಕ್ಯಾಂಟಿನ್ ರೀತಿ ಯೋಜನೆ ನಡೆಸಲು ಕಾಂಗ್ರೆಸ್ ಬದ್ಧವಾಗಿದೆ. ಕಾಂಗ್ರೆಸ್ ಇಂದಿರಾ ಕ್ಯಾಂಟಿನ್ ಮೂಲಕ ರುಚಿಕರ ಊಟ ಕೊಟ್ಟಿದೆ. ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಿದ್ದೆವು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮನ್ರೇಗಾ ಯೋಜನೆ ಜಾರಿ ಮಾಡಿದ್ದೆವು ಎಂದು ತಳಿಸಿದರು.

ನೋಟ್ ಬ್ಯಾನ್‌ ಮಾಡಿದ ಉದ್ದೇಶ ಏನೆಂದು ಕೇಂದ್ರ ಸರ್ಕಾರ ಹೇಳಲಿ. ಸಣ್ಣ ವ್ಯಾಪಾರಿಗಳು, ಬಡ ರೈತರಿಗೆ ಜಿಎಸ್‌ಟಿ ಬರೆ ಎಳೆದಿದೆ. ಜಿಎಸ್‌ಟಿ, ನೋಟ್ ಬ್ಯಾನ್ ಕ್ರಮಗಳು ರಾಷ್ಟ್ರಕ್ಕೇ ದುರಂತವಾಗಿದೆ ಎಂದು ವಾಗ್ದಾಳಿ ನಡೆಸಿದರು.

Published On - 3:41 pm, Wed, 3 August 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ