ದಾವಣಗೆರೆ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿಯಲ್ಲಿ ಎರಡು ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇರುವ ವಾಲ್ಮೀಕಿ ಗುರುಪೀಠದಲ್ಲಿ, ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಭಕ್ತರ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎಚ್. ಆಂಜನೇಯ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಜಗಳೂರು ಬಿಜೆಪಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ವಿ. ರಾಮಚಂದ್ರ ವಾಲ್ಮೀಕಿ ಜಾತ್ರಾ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ