ನನ್ನ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ, ಅರುಣ್ ಸಿಂಗ್ ಫೋನ್ ಮಾಡಿದ್ದರು: ರೇಣುಕಾಚಾರ್ಯ

Renukacharya: ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದರು. ನನ್ನನ್ನು ದೆಹಲಿಗೆ ಕರೆದಿದ್ದಾರೆ. ಹೀಗಾಗಿ ಫೆ 8ರಂದು ದೆಹಲಿಗೆ ತೆರಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ನನ್ನ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ, ಅರುಣ್ ಸಿಂಗ್ ಫೋನ್ ಮಾಡಿದ್ದರು: ರೇಣುಕಾಚಾರ್ಯ
ಎಂ.ಪಿ ರೇಣುಕಾಚಾರ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 02, 2022 | 4:59 PM

ದಾವಣಗೆರೆ: ನನ್ನ ವಿರುದ್ಧ ಕೆಲವರು ಪಕ್ಷದ ವರಿಷ್ಠರಿಗೆ ದೂರು ಕೊಟ್ಟಿದ್ದಾರೆ‌ ಎಂದು ಹೊನ್ನಾಳಿ ಕ್ಷೇತ್ರದ ಬಿಜೆಪಿ (BJP) ಶಾಸಕ ರೇಣುಕಾಚಾರ್ಯ (Renukacharya) ಹೇಳಿದರು. ಇತ್ತೀಚೆಗಷ್ಟೇ ಬಿಜೆಪಿ ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ (Arun Singh) ಫೋನ್‌ ಮಾಡಿದ್ದರು. ಬಹಿರಂಗವಾಗಿ ಹೇಳಿಕೆ ನೀಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ, ಹೀಗಾಗಿ ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದರು. ನನ್ನನ್ನು ದೆಹಲಿಗೆ ಕರೆದಿದ್ದಾರೆ. ಹೀಗಾಗಿ ಫೆ 8ರಂದು ದೆಹಲಿಗೆ ತೆರಳುತ್ತೇನೆ. ಫೆ 8, 9 ಹಾಗೂ 10ರಂದು ದೆಹಲಿಯಲ್ಲೇ ಇರುತ್ತೇನೆ. ನಾನು ದೆಹಲಿಗೆ ಹೋಗುವ ಬಗ್ಗೆ ಯತ್ನಾಳ್ ಜೊತೆ ಚರ್ಚಿಸಿಲ್ಲ. ಈ ಬಗ್ಗೆ ನಂತರ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ನನ್ನ ಅಭಿಪ್ರಾಯವನ್ನು ಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಗಮನ ಸೆಳೆದಿದ್ದೇನೆ. ನನ್ನ ಮನವಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ವಿರುದ್ಧ ದೂರು ನೀಡಿದವರಂತೆ ನಾನು ರೆಡಿಮೇಡ್ ಫುಡ್ ರೀತಿ ದಿಢೀರ್ ಮೇಲೆ ಬಂದವನಲ್ಲ. ಹಾದಿಬೀದಿಯಲ್ಲಿ ಹೋರಾಟ ಮಾಡಿಯೇ ಶಾಸಕನಾದವನು ಎಂದು ತಮ್ಮ ವಿರುದ್ಧ ದೂರು ನೀಡಿದ ಸ್ವಪಕ್ಷದ ಶಾಸಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಸಚಿವರ ವಿರುದ್ಧ ರೇಣುಕಾಚಾರ್ಯ ದೂರು ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಇತ್ತೀಚೆಗೆ ಹೇಳಿದ್ದರು. ನಾನು ಲಿಖಿತ ರೂಪದಲ್ಲಿ ಯಾರಿಗೂ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಪಕ್ಷನಿಷ್ಠರಿಗೆ ಅವಕಾಶ ಕೊಡಬೇಕು. 15ಕ್ಕೂ ಹೆಚ್ಚು ಸಚಿವರು ನಮ್ಮ ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ. ಕಡೆಪಕ್ಷ ನಮ್ಮನ್ನು ಗೌರವದಿಂದಲೂ ಕಾಣುವುದಿಲ್ಲ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಿದ್ದೇನೆ. ನಾಲ್ಕು ದಿನದೊಳಗೆ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಪಡಿಸುವ ಭರವಸೆ ಇದೆ ಎಂದರು.

ನಮಗೆ ಸಿಎಂ ಬೊಮ್ಮಾಯಿ ಹಾಗೂ ಕಟೀಲ್ ಬಗ್ಗೆ ಅಪಾರ ಗೌರವವಿದೆ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಗಮನಕ್ಕೂ ಇದನ್ನು ತರಲಿದ್ದೇವೆ. ನಾನು ಸರ್ಕಾರ ಅಥವಾ ಸಂಘಟನೆ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಐದು ನಿಮಿಷದಲ್ಲೇ ಭೇಟಿಯಾಗಿ ನಮ್ಮ ಕ್ಷೇತ್ರಗಳ ಕೆಲಸ ಕಾರ್ಯಗಳು, ಅನುದಾನ ಬಿಡುಗಡೆ ಸೇರಿದಂತೆ ಯಾವುದೇ ಕೆಲಸಕಾರ್ಯಗಳನ್ನು ಮಾಡಿಸಿಕೊಳ್ಳಬಹುದಿತ್ತು. ಈಗಲೂ ಕೂಡ ಬೊಮ್ಮಾಯಿ ಅವರು ನಮ್ಮನ್ನು ಅಷ್ಟೇ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಆದರೆ ಕೆಲವು ದುರಹಂಕಾರಿ ಸಚಿವರಿಂದ ಮುಜುಗರ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯಾವ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಹೇಳಲಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಪಟ್ಟಿಯನ್ನು ಬಿಡುಗಡೆ ಮಾಡಲಿ -ರೇಣುಕಾಚಾರ್ಯ ಇದನ್ನೂ ಓದಿ: ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ; ರೇಣುಕಾಚಾರ್ಯ ಗರಂ

Published On - 4:57 pm, Wed, 2 February 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ