ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ, ಪತ್ನಿಗೆ ಸೋಂಕು

Rashmi Kallakatta

|

Updated on: Apr 27, 2021 | 8:09 PM

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಮತ್ತು ಅವರ ಪತ್ನಿಗೆ ಕೊವಿಡ್ ರೋಗ ದೃಢಪಟ್ಟಿದೆ. ರಾಮಪ್ಪ ಅವರು ಮನೆಯಲ್ಲಿಯೇ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ, ಪತ್ನಿಗೆ ಸೋಂಕು
ರಾಮಪ್ಪ ಎಸ್


ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಮತ್ತು ಅವರ ಪತ್ನಿಗೆ ಕೊವಿಡ್ ರೋಗ ದೃಢಪಟ್ಟಿದೆ. ರಾಮಪ್ಪ ಅವರು ಮನೆಯಲ್ಲಿಯೇ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ .ಈವರೆಗೆ ಜಿಲ್ಲೆಯ‌ ಮೂವರು ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ.ಈ ಹಿಂದೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಸೋಂಕು ದೃಢಪಟ್ಟಿತ್ತು.ನನ್ನ ಸಂಪರ್ಕ ಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕ ಎಸ್ ರಾಮಪ್ಪ ವಿನಂತಿಸಿದ್ದಾರೆ.

ಕರ್ನಾಟಕದಲ್ಲಿ ಇಂದು 31,830 ಮಂದಿಗೆ ಕೊರೊನಾ ಸೋಂಕು

ಕರ್ನಾಟಕದಲ್ಲಿ ಮಂಗಳವಾರ (ಏಪ್ರಿಲ್ 27) ಒಟ್ಟು 31,830 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 180 ಜನರು ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮಾಜಿ ಶಾಸಕರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೊನಾ ಪಾಸಿಟಿವ್

ಬಾಗಲಕೋಟೆ: ಮಾಜಿ ಶಾಸಕ ಪಿ.ಹೆಚ್.ಪೂಜಾರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬಾಗಲಕೋಟೆ ಮಾಜಿ ಶಾಸಕ ಪಿ.ಹೆಚ್.ಪೂಜಾರ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಆದರೆ ಮದುವೆಗೆ ಬಂದಿದ್ದ ಎಂಟು ಜನರಿಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ಏಪ್ರಿಲ್ 24ರಂದು ಮಾಜಿ ಶಾಸಕದ ಪುತ್ರಿಯ ಮದುವೆ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿತ್ತು. ಕೊವಿಡ್ ನಿಯಮದ ಪ್ರಕಾರವೇ ಮದುವೆ ಸಮಾರಂಭ ನಡೆದಿತ್ತು. ಆದರೂ ಕೂಡ 8 ಜನರಿಗೆ ಕೊರೊನಾ ತಗುಲಿದೆ. ಸದ್ಯ ಮಾಜಿ ಶಾಸಕರ ಮನೆ ಬಳಿ ಬ್ಯಾರಿಕೇಡ್‌ ಹಾಕಿ ಸೀಲ್‌ಡೌನ್‌ ಹಾಕಲಾಗಿದೆ. ಬಾಗಲಕೋಟೆಯ ಮನೆ ಮಿನಿ ಕಂಟೇನ್ಮೆಂಟ್ ಜೋನ್ ಆಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರ ಸಂಪರ್ಕ ಪತ್ತೆ ಹಚ್ಚುತ್ತಿದ್ದಾರೆ.

ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್

ವಿಜಯಪುರ: ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢಪಟ್ಟಿದೆ. ಸೋಂಕಿತ 8 ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಾಲಮಂದಿರದ ಅಧೀಕ್ಷಕಿ ವಿ.ಜಿ ಮಾನೆ ಹೇಳಿದ್ದಾರೆ . ಈ ಬಾಲಮಂದಿರದಲ್ಲಿ ಒಟ್ಟು 42 ಜನ‌ ವಿದ್ಯಾರ್ಥಿನಿಯರಿದ್ದು, ಅದರಲ್ಲಿ 10 ಜನರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ಕೊವಿಡ್ ನೆಗೆಟಿವ್ ವರದಿ ಬಂದಿದ್ದು , 8 ವಿದ್ಯಾರ್ಥಿಗಳಿಗೆ ಕೊವಿಡ್ ದೃಢಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ ಮಾನೆ

ಬಾಲಕಿಯರ ಬಾಲ ಮಂದಿರದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಬಾಲ ಮಂದಿರವನ್ನು ಮೈಕ್ರೋಜೋನ್ ಮಾಡಲಾಗಿದ್ದು, ಉಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಸ್ಟೆಲ್ ಗಳಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕೊವಿಡ್ ನಿಯಮಗಳ ಪಾಲನೆಗಾಗಿ ತಂಡ ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನೀಲಕುಮಾರ್ ಹೇಳಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಹಾಸಿಗೆ ಸಂಖ್ಯೆ ಏರಿಕೆ

ಕೊರೊನಾ ಎರಡನೇ ಅಲೆಗೆ ತುತ್ತಾಗಿರುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಿ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ತೀವ್ರ ಕಡಿತಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿರ್ಣಯವನ್ನು ಬಿಎಲ್​ಡಿಇ ಸಂಸ್ಥೆ ಕೈಗೊಂಡಿದೆ.

ಕೊರೊನಾ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್‍ಗಳು ದೊರಕುತ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ವ್ಯಾಪಕ ಕೂಗು ವಿಜಯಪುರ ಜಿಲ್ಲೆಯಲ್ಲಿ ಕೇಳಿಬರುತ್ತಿತ್ತು. ಬಿಎಲ್ಡಿಇ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ್ ಆಸ್ಪತ್ರೆಯ ಹಿರಿಯ ವೈದ್ಯರ ಜೊತೆಗೆ ತುರ್ತು ಸಭೆ ನಡೆಸಿದರು.

ಬಿಎಲ್ಡಿಇ ಆಸ್ಪತ್ರೆಯಲ್ಲಿ 250 ಬೆಡ್‍ಗಳಿಗೆ ಮೀಸಲಾಗಿದ್ದ ಕೊರೊನಾ ಹಾಸಿಗೆಗಳ ಸಂಖ್ಯೆಯನ್ನು 500ಕ್ಕೆ ವಿಸ್ತರಣೆ ಮಾಡಲಾಗಿದ್ದು, ಇದರಲ್ಲಿ ಜನರಲ್ ವಾರ್ಡನಲ್ಲಿ 200, ಐ.ಸಿ.ಯು ನಲ್ಲಿ 50, ಮತ್ತು ಸ್ಪೆಷಲ್ ರೂಂಗಳಲ್ಲಿ 50. ಒಟ್ಟು 300 ಆಕ್ಸಿಜನ್ ಬೆಡ್‍ಗಳು ಲಭ್ಯವಿದೆ. ಅಲ್ಲದೇ 200 ಐಸೊಲೇಶನ್ ಬೆಡ್‍ಗಳು ಸೋಂಕಿತರಿಗೆ ಒದಗಿಸಲಾಗುತ್ತಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಅಲ್ಲದೇ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತಲೂ ಬಿಎಲ್ಡಿಇ ಆಸ್ಪತ್ರೆಯಲ್ಲಿ ಶೇ 70 ಕಡಿಮೆ ಶುಲ್ಕವನ್ನು ಕಳೆದ 2 ತಿಂಗಳಿಂದಲೂ ಪಡೆಯಲಾಗುತ್ತಿದೆ. ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಬಡವರಿಗೆ, ಜನಸಾಮಾನ್ಯರಿಗೆ ಅನಕೂಲವಾಗಲಿ ಎಂಬ ಕಾರಣದಿಂದ ರಿಯಾಯಿತಿ ಶುಲ್ಕವನ್ನು ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಂ.ಬಿ ಪಾಟೀಲ ಹೇಳಿದ್ದಾರೆ.

ರಾಜ್ಯ ಸರ್ಕಾರ ಜನರಲ್ ವಾರ್ಡ್‍ಗಳಲ್ಲಿ ಆಕ್ಸಿಜನ್ ರಹಿತ ಬೆಡ್‍ಗೆ ರೂಪಾಯಿ 10 ಸಾವಿರ ನಿಗದಿಪಡಿಸಿದ್ದಾರೆ ಬಿಎಲ್ಡಿಇಯಲ್ಲಿ 3 ಸಾವಿರ, ಆಕ್ಸಿಜನ್ ಸಹಿತ ಬೆಡ್‍ಗೆ ಸರ್ಕಾರ ನಿಗದಿಪಡಿಸಿದ ರೂ 12 ಸಾವಿರ ಬದಲಾಗಿ ಇಲ್ಲಿ ರೂ 5 ಸಾವಿರ ಹಾಗೂ ಐ.ಸಿ.ಯುನಲ್ಲಿ ವೆಂಟಿಲೆಟರ್ ಗೆ ರೂ 25 ಸಾವಿರ ನಿಗದಿತ ವೆಚ್ಚದ ಬದಲಾಗಿ ರೂ 8ಸಾವಿರ ಮಾತ್ರ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಬಾಲ್ಯ ವಿವಾಹ ತಡೆದ ಅಧಿಕಾರಿಗಳು; ಹೆತ್ತವರಿಗೆ ಜೈಲು ಶಿಕ್ಷೆ ಹಾಗೂ ದಂಡದ ಎಚ್ಚರಿಕೆ

(S Ramappa Congress MLA from Harihara tests coronavirus positive)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada