AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ, ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ -ಶಾಸಕ ಶಾಮನೂರು

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ‌. ಒಂದು ಡಿಸಿ ಕೊಟ್ಟಿಲ್ಲ. ಈ ಬಗ್ಗೆ ಸಿಎಂ ಜೊತೆ ಮಾತಾಡುವೆ‌. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂದು ಹೇಳುವೆ ಎಂದು ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ. ಇನ್ನು ಇದೇ ವೇಳೆ ಹೆಚ್​.ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ ಎಂದು ಕಿಡಿಕಾರಿದರು.

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ, ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ -ಶಾಸಕ ಶಾಮನೂರು
ಶಾಸಕ ಶಾಮನೂರು ಶಿವಶಂಕರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಆಯೇಷಾ ಬಾನು|

Updated on: Oct 02, 2023 | 5:00 PM

Share

ದಾವಣಗೆರೆ, ಅ.02: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (shamanur shivashankarappa) ಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು (Siddaramaiah), ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತರೇ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿಅಂಶಗಳಿವೆ ಎಂದು ತಿರುಗೇಟು ನೀಡಿದ್ದರು. ಸದ್ಯ ಈಗ ಮತ್ತೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ತಮ್ಮದೇ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ ಎಂದಿದ್ದಾರೆ.

ಹೆಚ್ ವಿಶ್ವನಾಥಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ‌. ಒಂದು ಡಿಸಿ ಕೊಟ್ಟಿಲ್ಲ. ಈ ಬಗ್ಗೆ ಸಿಎಂ ಜೊತೆ ಮಾತಾಡುವೆ‌. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂದು ಹೇಳುವೆ ಎಂದು ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ್ದಾರೆ. ಏಳು ಸಚಿವ ಸ್ಥಾನ ನೀಡಿದ್ದಾರೆ. ಅದರ ಬಗ್ಗೆ‌ ಪ್ರಶ್ನೆ ಇಲ್ಲ. ನಮ್ಮ ಲಿಂಗಾಯತ ಸಮಾಜದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿರುವೆ. ನಾನು ಸತ್ಯ ಹೇಳಿದ್ದೇನೆ. ಅದಕ್ಕೆ ಈ ವಿಚಾರ ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ. ಹೆಚ್ ವಿಶ್ವನಾಥಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ. ನನ್ನ ಹೇಳಿಕೆಗೆ ಎಂಎ​ಲ್​ಸಿ ಹೆಚ್ ವಿಶ್ವನಾಥ ಹೇಳಿಕೆ ನೀಡಿದ್ದಾರೆ. ನಾನು ಸತ್ಯ ಹೇಳಿದ್ದೇನೆ.‌ ವಿಶ್ವನಾಥ ತರ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್​ಸಿ ಆಗಿಲ್ಲ.‌ ನಾನು ಜನರಿಂದ ಎಳು ಸಲ ಎಂಎಲ್​ಎ ಆಗಿರುವೆ‌. ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದೆ. ಸಿಎಂ ಹಾಗೂ ನಾನು‌ ಕುಳಿತು ಮಾತಾಡುತ್ತೇವೆ. ಎಲ್ಲಿ ಯಾರಿಗೆ ಅನ್ಯಾಯ ಆಗಿದೆ ಎಂಬುದನ್ನ ನಾನು ಸ್ಪಷ್ಟ ಪಡಿಸುವೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಹೆಚ್ ವಿಶ್ವನಾಥ್ ವಾಗ್ದಾಳಿ

ಕಾಂಗ್ರೆಸ್​ನಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್ ಪ್ರಶ್ನಿಸಿದ್ದಾರೆ. ನಮ್ಮಲ್ಲಿ ಜಾತಿ ಆಧರಿಸಿ ಯಾರಿಗೂ ಹುದ್ದೆ ಕೊಡುವುದಿಲ್ಲ. ಬೇರೆ ಬೇರೆ ಜಾತಿಯವರಿಗೆ ಎಲ್ಲೆಲ್ಲಿ ಅವಕಾಶ ಮಾಡಿಕೊಡಬೇಕೋ, ಅಲ್ಲಿ ಮಾಡಿಕೊಟ್ಟಿದ್ದೇವೆ. ಲಿಂಗಾಯತರಿಗೆ ಏಳು ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ಇನ್ನೆಷ್ಟು ಸ್ಥಾನ ಕೊಡಬೇಕು ನಿಮಗೆ ಎಂದು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಹೆಚ್​.ವಿಶ್ವನಾಥ್ ತಿರುಗೇಟು ನೀಡಿದ್ದರು.

ದಾವಣಗೆರೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ