ಹಿರಿಯ ಜಾನಪದ ತಜ್ಞ ಎಂಜಿ ಈಶ್ವರಪ್ಪ ನಿಧನ

ರಂಗಭೂಮಿ, ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಮಧ್ಯ ಕರ್ನಾಟಕ ಭಾಗದಲ್ಲಿ ‘ಮೇಷ್ಟ್ರು’ ಎಂದೇ ಹೆಸರಾಗಿದ್ದ ಎಂ.ಜಿ. ಈಶ್ವರಪ್ಪ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು.

ಹಿರಿಯ ಜಾನಪದ ತಜ್ಞ ಎಂಜಿ ಈಶ್ವರಪ್ಪ ನಿಧನ
ಎಂ.ಜಿ. ಈಶ್ವರಪ್ಪ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು

Updated on: Jun 02, 2024 | 7:45 AM

ದಾವಣಗೆರೆ, ಜೂನ್.02: ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ (ಜೂ.01) ಸಂಜೆ ನಿಧನರಾದರು. ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂನ್ 2ರಂದು ಭಾನುವಾರ ಮಧ್ಯಾಹ್ನ 2ಕ್ಕೆ ದಾವಣಗೆರೆಯ ಶಾಮನೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಂ.ಜಿ. ಈಶ್ವರಪ್ಪ ಅವರು ರಂಗಭೂಮಿ, ಜಾನಪದ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಮಧ್ಯ ಕರ್ನಾಟಕ ಭಾಗದಲ್ಲಿ ‘ಮೇಷ್ಟ್ರು’ ಎಂದೇ ಹೆಸರಾಗಿದ್ದರು. 38 ವರ್ಷ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ತಮ್ಮ ಅನುಭವವನ್ನು ಧಾರೆ ಎರೆದಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಕರ್ನಾಟಕ ಸರ್ಕಾರ ಅವರಿಗೆ 2020ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇದನ್ನೂ ಓದಿ:90 ಕೆಜಿ ಇದ್ದ ಸೋನಾಕ್ಷಿ ಸಿನ್ಹಾ; 30 ಕೆಜಿ ದೇಹ ತೂಕ ಇಳಿಸಿಕೊಂಡಿದ್ದು ಹೇಗೆ?  

1950ರಲ್ಲಿ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಜನಿಸಿದ ಈಶ್ವರಪ್ಪ, ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಪೂರೈಸಿ, ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಪಡೆದು ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಹಾಗೂ ಪಿಎಚ್‌.ಡಿ ಪದವಿ ಗಳಿಸಿದ್ದರು. 1987ರಿಂದ 90ರವರೆಗೆ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರಲ್ಲದೆ, 2003ರಿಂದ 2006ರವರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ 2007ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದರು.

ಆರಂಭದಲ್ಲಿ ಡಿ.ಆರ್.ಎಂ ಕಾಲೇಜು ಆನಂತರ ಎಂ.ಎಸ್‌.ಬಿ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಬಳಿಕ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ನಾಟಕ ಅಕಾಡೆಮಿಯ ಗೌರವ ಫೆಲೋಶಿಪ್, ಕರ್ನಾಟಕ ಜಾನಪದ ಅಕಾಡೆಮಿಯ ‘ತಜ್ಞ ಪ್ರಶಸ್ತಿ’, ಕು.ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ, ದಾವಣಗೆರೆ ಜಿಲ್ಲೆಯ ‘ಮಹಲಿಂಗರಂಗ’ ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘದ ‘ಶಿವಕುಮಾರ ರಂಗ ಪ್ರಶಸ್ತಿ’ಗಳು ಇವರಿಗೆ ಲಭಿಸಿವೆ. ಎಂಜಿ ಈಶ್ವರಪ್ಪ ನಿಧನಕ್ಕೆ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಕಂಬನಿ ಮಿಡಿದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ