ಬಳ್ಳಾರಿ, ದಾವಣಗೆರೆ, ತುಮಕೂರಿನಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ನಾಲ್ವರು ದುರ್ಮರಣ

| Updated By: ವಿವೇಕ ಬಿರಾದಾರ

Updated on: Nov 29, 2022 | 11:02 PM

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡ ಗ್ರಾಮದ ಬಳಿ ನಡೆದಿದೆ.

ಬಳ್ಳಾರಿ, ದಾವಣಗೆರೆ, ತುಮಕೂರಿನಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ನಾಲ್ವರು ದುರ್ಮರಣ
ಸಾಂದರ್ಭಿಕ ಚಿತ್ರ
Follow us on

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ (Accident) ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davangere) ತಾಲೂಕಿನ ಆನಗೋಡ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಹನುಮಂತಪ್ಪ(58) ಮೃತರಾಗಿದ್ದು, 9 ಜನರಿಗೆ ಗಂಭೀರ ಗಾಯಗಳಾಗಿವೆ. ಕಾರು, ಮಿನಿ ಬಸ್, ಟಾಟಾ ಏಸ್​ ನಡುವೆ ಸರಣಿ ಅಪಘಾತವಾಗಿದೆ. ಗಾಯಗೊಂಡ 9 ಜನರ ಪೈಕಿ ಐವರ ಕಾಲು ಮುರಿದಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಮರಳೂರು ಕೆರೆ ಬಳಿ ನಡೆದಿದೆ.  ಹುಲಿಯೂರುದುರ್ಗ ನಿವಾಸಿಗಳಾದ ಅರುಣ್‌, ಚೇತನ್‌ ಮೃತ ದುರ್ದೈವಿಗಳು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಚಲಿಸುತ್ತಿದ್ದ ಕಾರಿಗೆ, ಕುಣಿಗಲ್ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ.  ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಬಳ್ಳಾರಿ: ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಗ್ರಾಮದಲ್ಲಿ ನಡೆದಿದೆ. ಹನುಮರೆಡ್ಡಿ(62) ಮೃತ ವ್ಯಕ್ತಿ. ಹನುಮರೆಡ್ಡಿ ಪೆಟ್ರೋಲ್ ಹಾಕಿಸಿಕೊಂಡು ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.    ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Tue, 29 November 22