ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕಳ: ನಾಲ್ಕು ವರ್ಷದ ಬಳಿಕ 20 ವರ್ಷ ಜೈಲು, ದಂಡ ವಿಧಿಸಿ ನ್ಯಾಯಾಲಯ ಆದೇಶ
ಶಿವು ಅಲಿಯಾಸ್ ಶಿವಕುಮಾರ(26) ಎಂಬ ಯುವಕ, ಅಂಗಳದಲ್ಲಿ ಆಡುತ್ತಿದ್ದ ಮೂರು ವರ್ಷದ ಬಾಲಕಿಯನ್ನ ಕರೆದು ತಿಂಡಿಕೊಡಿಸುವುದಾಗಿ ಪುಸಲಾಯಿಸಿ ತಮ್ಮನೆಯ ದನ ಕೊಟ್ಟಿಗೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ.
ದಾವಣಗೆರೆ: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 20 ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಬಾಲಕಿಗೆ 6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಶಿವು ಅಲಿಯಾಸ್ ಶಿವಕುಮಾರ(26) ಎಂಬ ಯುವಕ, ಅಂಗಳದಲ್ಲಿ ಆಡುತ್ತಿದ್ದ ಮೂರು ವರ್ಷದ ಬಾಲಕಿಯನ್ನ ಕರೆದು ತಿಂಡಿಕೊಡಿಸುವುದಾಗಿ ಪುಸಲಾಯಿಸಿ ತಮ್ಮನೆಯ ದನ ಕೊಟ್ಟಿಗೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ. ತನ್ನ ಕೆಲಸ ಮುಗಿದ ಮೇಲೆ ಜನಕ್ಕೆ ಗೊತ್ತಾಗುತ್ತದೆ ಎಂದು ಬಾಲಕಿಯನ್ನ ಬಿಟ್ಟು ಓಡಿ ಹೋಗಿದ್ದ. ಪೋಷಕರು ಬಾಲಕಿಯನ್ನು ಹುಡುಕಿಕೊಂಡು ಬಂದಾಗ ಬಾಲಕಿ ಅಳುತ್ತಿದ್ದಳು. ಗುಪ್ತಾಂಗಗಳಿಗೆ ಗಾಯವಾಗಿತ್ತು. ಇಂತಹ ಹೀನ ಕೃತ್ಯ ಎಸಗಿದ ನೀಚನಿಗೆ ಘಟನೆ ನಡೆದು ನಾಲ್ಕು ವರ್ಷಗಳ ಬಳಿಕ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ. ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.
2018ರಲ್ಲಿ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಪ್ರಕರಣ ವಿಚಾರಣೆ ನಡೆಸಿ ನ್ಯಾಯಮೂರ್ತಿ ಶ್ರೀಪಾದ ಎನ್, ಆರೋಪ ಸಾಭೀತಾದ ಹಿನ್ನೆಲೆ 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಜೊತೆಗೆ ಮಾನವೀಯ ದೃಷ್ಟಿಯಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ ಆರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೂಡಾ ನ್ಯಾಯಾಲಯ ಆದೇಶ ಮಾಡಿದೆ. ಸರ್ಕಾರಿ ಅಭಿಯೋಜಕ ಜಯಪ್ಪ ಕೆ.ಜಿ ಸರ್ಕಾರದ ಪರ ವಾದ ಮಂಡಿಸಿದ್ರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ