ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು; ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

ದಾವಣಗೆರೆ(Davanagere) ನಗರದ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ 24 ನೇ ಮಹಾ ಅಧಿವೇಶನದ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ‘ಸರ್ವರ ಭಾವನೆಗಳಿಗೆ ಬೆಲೆ ಕೊಡಬೇಕು. ಕಾಂತರಾಜ ಆಯೋಗದ ವರದಿಯಲ್ಲಿ ಹತ್ತಾರು ದೋಷಗಳಿದ್ದು, ಇದನ್ನ ಅಂಗೀಕರಿಸುವುದು ಬೇಡ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು; ಶಾಮನೂರು ಶಿವಶಂಕರಪ್ಪ ಎಚ್ಚರಿಕೆ
ಶಾಮನೂರು ಶಿವಶಂಕರಪ್ಪ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 24, 2023 | 8:16 PM

ದಾವಣಗೆರೆ, ಡಿ.24: ರಾಜ್ಯ ಸರ್ಕಾರ ಜಾತಿ ಗಣತಿ(caste census)ಯನ್ನ ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(Shamanuru Shivashankarappa)ನವರು ಎಚ್ಚರಿಕೆ ಕೊಟ್ಟಿದ್ದಾರೆ. ದಾವಣಗೆರೆ(Davanagere) ನಗರದ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ 24 ನೇ ಮಹಾ ಅಧಿವೇಶನದ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಅವರು ‘ಸರ್ವರ ಭಾವನೆಗಳಿಗೆ ಬೆಲೆ ಕೊಡಬೇಕು. ಕಾಂತರಾಜ ಆಯೋಗದ ವರದಿಯಲ್ಲಿ ಹತ್ತಾರು ದೋಷಗಳಿದ್ದು, ಇದನ್ನ ಅಂಗೀಕರಿಸುವುದು ಬೇಡ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ಜಾತಿ ಗಣತಿ ಅಂಗೀಕಾರ ಬೇಡ ಎಂದ ಶಾಮನೂರ

‘ಜಾತಿ ಗಣತಿ ವರದಿ ಸಮರ್ಪಕವಾಗಿಲ್ಲ, ಮೇಲಾಗಿ ಯಾವ ಜಾತಿಯ ಜನ ಸಂಖ್ಯೆ ಎಷ್ಟಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಹೀಗೆ ಮಾಧ್ಯಮಗಳಲ್ಲಿ ಬಹಿರಂಗವಾಗಿ ಬಂದ ವರದಿಯನ್ನ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಥವಾ ರಾಜ್ಯ ಸರ್ಕಾರ ಅಲ್ಲಗಳೆದಿಲ್ಲ. ಈ ಎಲ್ಲ ಕಾರಣಕ್ಕೆ ಜಾತಿ ಗಣತಿ ಅಂಗೀಕಾರ ಬೇಡ. ಈ ವಿಚಾರದಲ್ಲಿ ಸರ್ಕಾರ ಹಟಕ್ಕೆ ಬಿಳಬಾರದು. ನಮ್ಮದು ಸರ್ವಜ‌ನಾಂಗದ ಶಾಂತಿಯ ತೋಟ. ಜಾತಿ ಗಣತಿ ಅಂಗೀಕಾರ ಬೇಡ ಎಂದು ಶಾಮನೂರ ಹೇಳಿದ್ದಾರೆ.

ಇದನ್ನೂ ಓದಿ:ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ

ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದಿದ್ದ ಶಿವಶಂಕರಪ್ಪ

ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದರು. ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗೆ ಚಿಂತನೆ ನಡೆಯಬೇಕು. ಹಾನಗಲ್ ಕುಮಾರಸ್ವಾಮಿಗಳು ಸಮಗ್ರ ವೀರಶೈವರ ಕಲ್ಯಾಣಕ್ಕಾಗಿ ಸಮಾಜವನ್ನು ಸಂಘಟನೆ  ಮಾಡಿದ್ದಾರೆ. ಇಂತಹ ಸಂಘಟನೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Sun, 24 December 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ