ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯ: ಹಿರಿಯ ಮುಖಂಡ ಕಾಂಗ್ರೆಸ್ಗೆ ಗುಡ್ಬೈ
ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್ಗೆ ಗುಡ್ಬೈ ಹೇಳಿದ್ದಾರೆ.
ದಾವಣಗೆರೆ, ಏ.09: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಈ ಮಧ್ಯೆ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಗೆ ಮತ್ತೊಂದು ಕಂಟಕ ಎದುರಾಗಿದೆ. ಹೌದು, ಶಾಮನೂರು ಶಿವಶಂಕರಪ್ಪ(Shamanuru Shivashankarappa) ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಹಿಂದ ವರ್ಗದ ಮುಖಂಡರು ಕಾಂಗ್ರೆಸ್ಗೆ ಗುಡ್ಬೈ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡ ಡಾ.ವೈ.ರಾಮಪ್ಪ, ‘ದಾವಣಗೆರೆಯಲ್ಲಿ ಕಾಂಗ್ರೆಸ್ ಅಂದ್ರೆ ಪ್ರೈವೇಟ್ ಲಿಮಿಟೆಡ್ ರೀತಿ ಇದೆ. ಒಂದು ಕುಟುಂಬಕ್ಕೆ ಮಾತ್ರ ಜಿಲ್ಲೆಯಲ್ಲಿ ಕಾಂಗ್ರೆಸ್ ಸೀಮಿತವಾಗಿದೆ ಎಂದು ಕಿಡಿಕಾರಿದರು.
‘ಕನಿಷ್ಠ ಜ್ಞಾನವಿಲ್ಲದ ವ್ಯಕ್ತಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಚುನಾವಣೆಯಲ್ಲಿ ಬೋವಿ ಸಮುದಾಯವನ್ನು ಕಡೆಗಣಿಸಿದ್ದಾರೆ. ಚುನಾವಣೆಗೆ ದುಡಿಯಲು ಮಾತ್ರ ಅಹಿಂದ ವರ್ಗ ಬೇಕು. ಆದ್ದರಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ(ಏ.10) ದೆಹಲಿ ಪ್ರವಾಸ ಬಳಿಕ ಯಾವ ಪಕ್ಷಕ್ಕೆ ಬೆಂಬಲ ಎಂದು ತಿಳಿಸುತ್ತೇನೆ ಎಂದರು.
ಇದನ್ನೂ ಓದಿ:ಹವಾನಿಯಂತ್ರಿತ ಕ್ಕಿನಿಕ್ ನಿಂದ ಹೊರಬಂದು ದಾವಣಗೆರೆಯ ಸುಡುಬಿಸಿಲಲ್ಲಿ ಮತಯಾಚಿಸುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ
ಇನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಏಪ್ರಿಲ್ 05 ರಂದು ಆಧಾರ್ ಕಾರ್ಡ್ ತೋರಿಸಿ ಬಸ್ನಲ್ಲಿ ಪ್ರಯಾಣ ಮಾಡಿದ್ದರು. ಆ ಮೂಲಕ ದಾವಣಗೆರೆಯಲ್ಲಿ ಸಿಟಿ ಬಸ್ನಲ್ಲಿ ಪ್ರಯಾಣಿಸಿ ‘ಶಕ್ತಿ ಯೋಜನೆ’ ಮಾಹಿತಿ ಸಂಗ್ರಹಿಸಿದ್ದರು. ಉಚಿತ ಬಸ್ ಪ್ರಯಾಣದ ಕುರಿತು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:49 pm, Tue, 9 April 24