AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ ನಮಗೇನೂ ಬೇಸರವಿಲ್ಲ: ಶಾಸಕ ಶಾಮನೂರ ಶಿವಶಂಕರಪ್ಪ
ಶಾಮನೂರ ಶಿವಶಂಕರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 10, 2023 | 5:15 PM

Share

ದಾವಣಗೆರೆ, ಡಿಸೆಂಬರ್​​ 10: ಸರ್ವ ವೀರಶೈವ ಲಿಂಗಾಯತರು ಕೇಂದ್ರದ ಓಬಿಸಿ ಪಟ್ಟಿಗೆ ಸೇರಬೇಕು. ‌ಜೊತೆಗೆ ಜಾತಿ ‌ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಬೇಕಿದ್ದರೇ ಸಿಎಂ ಸಿದ್ದರಾಮಯ್ಯ ಮಾಡಲಿ ನಮ್ಮದೇನು ಬೇಸರವಿಲ್ಲ. ಈ ಬಗ್ಗೆ ವೀರ ಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೇ 23 ಮತ್ತು 24 ರಂದು ದಾವಣಗೆರೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ 24ನೇ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನ ನಡೆಯಲಿದೆ. ಕನಿಷ್ಟ 3 ರಿಂದ 4 ಲಕ್ಷ ಜನ ಸೇರುತ್ತಾರೆ. ವೀರಶೈವ ಪರಂಪರೆಯ ಎಲ್ಲ ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮಹಾ ಅಧಿವೇಶನದ ಬಗ್ಗೆ ಜನರಿಗೆ ಮಾಹಿತಿ‌ ನೀಡಲು‌ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ

ಮುರಘಾ ಶ್ರೀ ವಿಚಾರವಾಗಿ ಮಾತನಾಡಿದ ಅವರು, ಚಿತ್ರದುರ್ಗದ ಮುರಘಾಶ್ರೀ ಅವರು ಆರೋಪ ಮುಕ್ತರಾಗಿ ಹೊರಬರಲಿ. ಆಮೇಲೆ ವೀರಶೈವ ‌ಮಹಾ ಅಧಿವೇಶಕ್ಕೆ ಕೆರಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಅಖಿಲ ಭಾರತ ವೀರ ಶೈವ ಮಹಾ ಸಭೆಯ ಮಹಾ ಅಧಿವೇಶನವನ್ನು ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾ ಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು.

ಇದನ್ನೂ ಓದಿ: ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಇತ್ತೀಚೆಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ ಎಂದಿದ್ದರು.

ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:11 pm, Sun, 10 December 23

ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್