ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ದಾವಣಗೆರೆ ನಗರದ ಹೊರವಲಯದ ಆವರಗೆರೆ ದನವಿಓಣಿಯಲ್ಲಿನ ನೂರಕ್ಕೂ ಹೆಚ್ಚು ಗುಡಿಸಲು ತೆರವು ಮಾಡಲಾಗಿದೆ. ಕಾರ್ಯಾಚರಣೆಗೆ ಅಡ್ಡಿ‌ಪಡಿಸಿದರು ಎಂಬ ಕಾರಣ ಹೇಳಿ ಹತ್ತಕ್ಕೂ ಹೆಚ್ಚು ಸ್ಥಳೀಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ
ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿ
Follow us
TV9 Web
| Updated By: ganapathi bhat

Updated on:Mar 04, 2022 | 12:10 PM

ದಾವಣಗೆರೆ: ಇಲ್ಲಿನ ಜಿಲ್ಲಾಡಳಿ ರಾತ್ರೋರಾತ್ರಿ ಗುಡಿಸಲು ತೆರವು ಗೊಳಿಸಿದೆ. ಈ ಬಗ್ಗೆ ಸ್ಥಳೀಯರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹತ್ತಾರು ಜೆಸಿಬಿ ಹಾಗೂ ಇನ್ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸಹಾಯದಿಂದ ಗುಡಿಸಲು ತೆರವು ಮಾಡಲಾಗಿದೆ. ದಾವಣಗೆರೆ ನಗರದ ಹೊರವಲಯದ ಆವರಗೆರೆ ದನವಿಓಣಿಯಲ್ಲಿನ ನೂರಕ್ಕೂ ಹೆಚ್ಚು ಗುಡಿಸಲು ತೆರವು ಮಾಡಲಾಗಿದೆ. ಕಾರ್ಯಾಚರಣೆಗೆ ಅಡ್ಡಿ‌ಪಡಿಸಿದರು ಎಂಬ ಕಾರಣ ಹೇಳಿ ಹತ್ತಕ್ಕೂ ಹೆಚ್ಚು ಸ್ಥಳೀಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಲ್ಲಿ ಮತ್ತೆ ಗುಡಿಸಲು ಹಾಕುತ್ತೇವೆ. ನಮಗೆ ಮನೆಗಳಿಲ್ಲ. ಬಾಡಿಗೆ ಕಟ್ಟಿ ಬದುಕುವಷ್ಟು ಶಕ್ತಿ ಇಲ್ಲ. ಮತ್ತೆ ಅಲ್ಲಿ ಗುಡಿಸಲು ಹಾಕುತ್ತೇವೆ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವಣ ನಿರ್ಮಾಣವಾಗಿದೆ. ಇತ್ತ ಜೆಸಿಬಿ ವಾಹನ ಚಾಲಕನ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ ಎಂದು ಅಧಿಕಾರಿಗಳ ಆರೋಪ ಕೇಳಿಬಂದಿದೆ. ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ, ತಹಶಿಲ್ದಾರ ಗೀರೀಶ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಹಾಗೂ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಕಳಸ: 2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ

ಚಿಕ್ಕಮಗಳೂರು ಜಿಲ್ಲೆಯ ಕಳಸ ಸಂತ್ರಸ್ತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. 2019 ರ ಮಹಾಮಳೆಯಲ್ಲಿ ಮನೆ, ಜಮೀನು ಕಳೆದುಕೊಂಡಿದ್ದ ಜನರಿಗೆ ಈವರೆಗೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ. ಮನೆ, ಜಮೀನು ಕಳೆದುಕೊಂಡ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣ ನೀಡಿಲ್ಲ. ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಹಲವು ಕಡೆ ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಇತ್ತ ಬೆಂಗಳೂರಿನಲ್ಲಿ ಕೂಡ ಇಂದು ಪ್ರತಿಭಟನೆಗಳು ನಡೆಯುತ್ತಿವೆ. ಪೊಲೀಸರಿಗೆ (Police) ನ್ಯಾಯ ಕೊಡಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್​ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ. ಪೊಲೀಸರಿಗೆ ಅನೇಕ ವರ್ಷಗಳಿಂದ ಪ್ರೊಮೋಷನ್ ಆಗಿಲ್ಲ. ಸಂಬಳದಲ್ಲೂ ಅನ್ಯಾಯ ಆಗಿದೆ. ಬಜೆಟ್ನಲ್ಲಿ ಇದನ್ನ ಸರಿಪಡಿಸುವಂತೆ ಅಧ್ಯಕ್ಷ ಶಿವಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಇದನ್ನೂ ಓದಿ: ದಾವಣಗೆರೆ: ಸರಳ ಪ್ರಶ್ನೆಗಳಿಗೂ ಉತ್ತರಿಸದ ಮಕ್ಕಳು; ಇಂಗ್ಲಿಷ್ ಶಿಕ್ಷಕನಿಗೆ ನೋಟಿಸ್ ನೀಡಲು ಡಿಸಿ ಸೂಚನೆ

Published On - 9:58 am, Fri, 4 March 22

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ