ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರರ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳ ಮೇಲೆ ಕೈಗೊಂಡಿರುವ ಕ್ರಮದ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ವರದಿ ಕೇಳಿದ್ದಾರೆ.

ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ
ರೇಣುಕಾಚಾರ್ಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2023 | 9:22 AM

ದಾವಣಗೆರೆ, (ಅಕ್ಟೋಬರ್ 02): ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (MP renukacharya) ಪುತ್ರಿ ಹಾಗೂ ಸಹೋದರರ ಜಾತಿ ಪ್ರಮಾಣ ಪತ್ರ (SC caste certificate) ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳ ಮೇಲೆ ಕೈಗೊಂಡಿರುವ ಕ್ರಮದ ಕುರಿತು ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರ ಜಾತಿ ಪ್ರಮಾಣ ಪತ್ರ ರದ್ದು ಮಾಡಿ 2023 ಏಪ್ರಿಲ್​ 19 ಮತ್ತು ಜೂನ್ 27 ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ರೇಣುಕಾಚಾರ್ಯ ಪುತ್ರಿ ಹಾಗೂ ಸಹೋದರರು ಪಡೆದ ಸುಳ್ಳು ಜಾತಿ ಪತ್ರ ಪಡೆದಿದ್ದು ಸ್ಪಷ್ಟವಾಗಿದ್ದು, ಈ ಬಗ್ಗೆ ಸ್ಪಷ್ಷ ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಗೆ ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ಉಪ ನಿರ್ದೇಶಕರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?

ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ ಹಾಗೂ ರೇಣುಕಾಚಾರ್ಯ ಸಹೋದರರಾದ ಎಂಪಿ ದ್ವಾರಕೇಶ್ವರಯ್ಯ, ಎಂಪಿ ವಾಗೀಶ್ ಅವರು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಎಂಪಿ ದ್ವಾರಕೇಶ್ವರಯ್ಯ ಅವರು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದು ಈ ಹಿಂದೆ ಕಲಬುರಗಿ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಒಮ್ಮೆ ಸ್ಪರ್ಧೆ ಮಾಡಿದ್ದರು.

ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌. ಚೇತನಾ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದರು. ಆ ಜಾತಿ ಪ್ರಮಾಣಪತ್ರವನ್ನು ಚೇತನಾ ಬಳಸಿ ಸರಕಾರದ ಸವಲತ್ತು ಪಡೆದಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಎಂ.ಪಿ.ರೇಣುಕಾಚಾರ್ಯ ಹೇಳುವಂತೆ ”ನನ್ನ ಪುತ್ರಿಗೆ ಸಹೋದರ ಎಸ್‌ಸಿ ಜಾತಿ ಪ್ರಮಾಣಪತ್ರ ಕೊಡಿಸಿದ್ದು ನಿಜ. ಆ ವಿಷಯ ನನ್ನ ಗಮನಕ್ಕೆ ಬಂದ ಕೂಡಲೇ ಅದನ್ನು ರದ್ದು ಮಾಡಲು ಅಂದೇ ಪತ್ರ ನೀಡುವಂತೆ ಸೂಚಿಸಿದ್ದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ