ದಾವಣಗೆರೆ: ಸ್ವಾತಂತ್ರ್ಯ ದಿನಾಚರಣೆ ದಿನವೇ ದಾವಣಗೆರೆ ತಾಲೂಕಿನ ಬಾವಿಹಾಳ್ ಗ್ರಾಮದಲ್ಲಿ ಕಾರ್ಮಿಕರು ಪ್ರತಿಭಟನೆ (Protest) ಮಾಡುತ್ತಿದ್ದಾರೆ. ಸೋಲಾರ್ ಪ್ಲಾಂಟ್ನಲ್ಲಿ (Solar Plant) ಕನಿಷ್ಠ ವೇತನ ನೀಡುತ್ತಿಲ್ಲ. ರಜೆ ಸೇರಿ ಯಾವುದೇ ಸೌಲಭ್ಯ ನೀಡುತ್ತಿಲ್ಲ ಅಂತ ಆರೋಪಿಸಿ ಜಿಂದಾಲ್ ಕಂಪನಿಗೆ ಸೇರಿದ ಸೋಲಾರ್ ಪ್ಲಾಂಟ್ನಲ್ಲಿ ಕೆಲಸ ಮಾಡುವ ಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಸೋಲಾರ್ ಪ್ಲಾಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಯಾವುದೇ ರೀತಿಯ ಸೌಲಭ್ಯ ಸಿಗುತ್ತಿಲ್ಲವೆಂದು ನಾಲ್ಕು ದಿನಗಳಿಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ
ಇನ್ನು ಮಂಡ್ಯದಲ್ಲೂ ಸ್ವಾತಂತ್ರ್ಯ ದಿನದಂದು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ರೈತ ಸಂಘದ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿದ ಧರಣಿ ಮಾಡುತ್ತಿದ್ದಾರೆ. ಮನ್ಮುಲ್ ಹಗರಣ ಸಿಬಿಐಗೆ ವಹಿಸಬೇಕು. ಜಿಲ್ಲೆಯ ಎಲ್ಲಾ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಅಂತ ಒತ್ತಾಯಿಸಿ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅರೆಬೆತ್ತಲೆಯಾಗಿ ಉರುಳು ಸೇವೆ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಆಗಸ್ಟ್ 10ಕ್ಕೆ ಬೆಳಗಾವಿಯ ರೈತರು ಚೆನ್ನಮ್ಮ ವೃತ್ತದಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಸೋಮು ರೈನಾಪುರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಬೆಳಗಾವಿ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೂ ಉರುಳು ಸೇವೆ, ಪ್ರತಿಭಟನೆ ಮಾಡಿದ್ದರು. ಕೇಂದ್ರ ಸರ್ಕಾರ, ಪ್ರಧಾನಿಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ವಿದ್ಯುತ್ ಖಾಸಗೀಕರಣ ನಿರ್ಧಾರ ರೈತ ವಿರೋಧಿಯಾಗಿದೆ. ತಕ್ಷಣವೇ ಸರ್ಕಾರ ಈ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತ ಪ್ರತಿಭಟನಾಕಾರರು, ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ
Independence Day: ಭಾರತದ ಜೊತೆ ಈ ದೇಶಗಳಿಗೂ ಇಂದು ರಾಷ್ಟೀಯ ದಿನದ ಸಂಭ್ರಮ
ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ
(Solar plant workers are protesting in Davanagere)