ದಾವಣಗೆರೆ: ನಗರದಲ್ಲಿ ಕಾಂಗ್ರೆಸ್(Congress) ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಬೆಂಕಿಯಿಟ್ಟ ಕೇಸ್ಗೆ ಸಂಬಂಧಿಸಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಮೊಹಮ್ಮದ್ ನಲಪಾಡ್(Mohammad Nalpad) ಸಮರ್ಥನೆಯ ಹೇಳಿಕೆ ಕೊಟ್ಟಿದ್ದಾರೆ. ಬೆಂಕಿಯಿಡಿ ಎಂದು ನಾನು ಹೇಳಿಲ್ಲ, ನಮ್ಮ ಹುಡುಗರು ಮಾಡಿದ್ದಾರೆ, ನಾನು ಫೇಸ್ ಮಾಡುತ್ತೇನೆ ಎಂದಿದ್ದಾರೆ.
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಬೆಂಕಿಯಿಡಿ ಎಂದು ನಾನು ಹೇಳಿಲ್ಲ, ಆಕ್ರೋಶದಲ್ಲಿ ನಮ್ಮ ಹುಡುಗರು ಬೆಂಕಿ ಹಚ್ಚಿದ್ದಾರೆ. ಇದನ್ನು ನಾನು ಫೇಸ್ ಮಾಡುತ್ತೇನೆ. ನಾನು ಎಲ್ಲೂ ಓಡಿ ಹೋಗಿಲ್ಲ, ವಿಚಾರಣೆಗೆ ಕರೆದರೆ ಹೋಗುತ್ತೇನೆ ಎಂದು ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರಿಗೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಾರಿಗೆ ಬೆಂಕಿ ಹಚ್ಚಿದ್ದ ಆರೋಪಿ ಶಾಂತಪ್ಪನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೈಕ್ನಲ್ಲಿ ಇಬ್ಬರು ಯುವಕರನ್ನು ಕರೆತಂದು ಗುಜರಿ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಸದ್ಯ ಶಾಂತಪ್ಪನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಿಬ್ಬರು ಆರೋಪಿಗಳಿಗಾಗಿ ಶೇಷಾದ್ರಿಪುರಂ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಐವರು ಆರೋಪಿಗಳಿಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು
ಇನ್ನು ಕಾಂಗ್ರೆಸ್ ಪ್ರತಿಭಟನೆ ವೇಳೆ ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. 6ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಮಂಜುನಾಥ್, ಖುಷ್ವಂತ್, ಅಗಸ್ಟಿನ್, ದಕ್ಷಿಣಾಮೂರ್ತಿ ಹಾಗೂ ರಿಯಾನ್ ರಾಜುಗೆ ಜಾಮೀನು ನೀಡಲಾಗಿದ್ದು ಮುಂದಿನ 4 ದಿನ ಠಾಣಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಜುಲೈ 21ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಗೆ ನೋಟಿಸ್ ನೀಡಿತ್ತು. ಹೀಗಾಗಿ ದೆಹಲಿಯ ಇಡಿ ಕಚೇರಿಗೆ ಸೋನಿಯಾ ವಿಚಾರಣೆಗೆ ಹಾಜರಾದ್ರೆ ಮತ್ತೊಂದು ಕಡೆ ದೇಶಾದ್ಯಂತ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತ್ತು. ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೀದಿಗಿಳಿದಿದ್ರು. ಮೋದಿ ಸರ್ಕಾರದ ವಿರುದ್ಧ ಕೆಂಡ ಕಾರಿದ್ರು. ಬೆಂಗಳೂರಲ್ಲಿ ಕಾಂಗ್ರೆಸ್ ಆಕ್ರೋಶ ಕೂಡ ಜೋರಾಗಿತ್ತು. ಈ ವೇಳೆ ಶಾಂತಿನಗರದ ಇಡಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮದೇ ಕಾರಿಗೆ ಬೆಂಕಿ ಹಚ್ಚಿದ್ರು. ಇನ್ನು ಶೇಷಾದ್ರಿಪುರಂನಲ್ಲೂ ಕಾರಿಗೆ ಬೆಂಕಿ ಹಚ್ಚಲಾಗಿತ್ತು.
Published On - 7:21 pm, Fri, 22 July 22