Davanagere News: ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ಕಾಂಪೌಂಡ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

|

Updated on: Jun 21, 2023 | 10:58 AM

ಸಿನಿಕ್ಷಾ ಕಾಂಪೌಂಡ್​ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಳು. ಈ ವೇಳೆ ಬಾಲಕಿಯನ್ನ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬಾಲಕಿ ಆಸ್ಪತ್ರೆಯಲ್ಲೇ ಪ್ರಾಣ ಬಿಟ್ಟಿದ್ದಾಳೆ.

Davanagere News: ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ಕಾಂಪೌಂಡ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು
ಸಿನಿಕ್ಷಾ
Follow us on

ದಾವಣಗೆರೆ: ವಸತಿ ಕಾಲೇಜೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ(Student) ಕಾಂಪೌಂಡ್​ನಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್​ನಲ್ಲಿ ನಡೆದಿದೆ. ಸಿನಿಕ್ಷಾ(16) ಮೃತ ವಿದ್ಯಾರ್ಥಿನಿ.

ಸಿನಿಕ್ಷಾ ಕಾಂಪೌಂಡ್​ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಳು. ಈ ವೇಳೆ ಬಾಲಕಿಯನ್ನ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬಾಲಕಿ ಆಸ್ಪತ್ರೆಯಲ್ಲೇ ಪ್ರಾಣ ಬಿಟ್ಟಿದ್ದಾಳೆ. ಮೃತ ಬಾಲಕಿ ಸಿನಿಕ್ಷಾ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಶಶಿಕಾಂತ ಎಂಬುವವರ ಪುತ್ರಿ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಮಾನ್ಯತಾ ವಸತಿ ಕಾಲೇಜಿನಲ್ಲಿ ‌ಸೈನ್ಸ್ ವಿಭಾಗದ ಪಿಯು ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿದ್ದಳು. ಸದ್ಯ ಘಟನೆ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2015ರಲ್ಲಿ ಇದೇ ಕಾಲೇಜ್​ನಲ್ಲಿ ಓದುತ್ತಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ಮೂಲದ ಮಾಲಾಶ್ರೀ ಬಿರಾದಾರ ಎಂಬ‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಗ ಪಾಲಕರು ಸಂಸ್ಥೆ ವಿರುದ್ದ ದೂರು ನೀಡಿದ್ದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂಸ್ಥೆಗೆ ಭೇಟಿ ನೀಡಿ ಆಡಳಿತ ಮಂಡಳಿಯನ್ನ ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಸ್ನೇಹಿತರ ಜೊತೆ ತೆರಳಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆ; ಸೇತುವೆ ಮೇಲಿಂದ ತಳ್ಳಿ ಕೊಲೆ ಶಂಕೆ

ಕೆರೆಗೆ ಬಿದ್ದು ಮಹಿಳೆ ಆತ್ಮಹತ್ಯೆ

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಕೆರೆಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನಾರೋಗ್ಯದ ಕಾರಣದಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವ್ವ ಚಿಕ್ಕನರ್ತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಕರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:48 am, Wed, 21 June 23