AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಳೆಕೆರೆ – ಏಷ್ಯಾದ 2ನೇ ಅತಿ ದೊಡ್ಡ ಕೆರೆ ಇನ್ನು 20 ದಿನದಲ್ಲಿ ಖಾಲಿ ಖಾಲಿ: ಆತಂಕ, ಭಯದಲ್ಲಿ ಜನ

ಹತ್ತಾರು ಕಡೆ ಕುಡಿಯುವ ನೀರಿಗೆ ಆಸರೆ ಆಗಿದ್ದ ಸೂಳೆಕೆರೆ ಈಗ ಸಂಕಷ್ಟದಲ್ಲಿದೆ. ಕಾರಣ ಇನ್ನು ಕೇವಲ 20 ದಿನಗಳಿಗೆ ಆಗುವಷ್ಟು ನೀರು ಮಾತ್ರ ಕೆರೆಯಲ್ಲಿದೆ. ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಖಾಲಿ ಆಗುತ್ತಿರುವುದು ಭಯ ಆತಂಕವನ್ನುಂಟು ಮಾಡುತ್ತಿದೆ. ಇಲ್ಲಿದೆ ನೋಡಿ ಸೂಳೆಕೆರೆ ಸಂಕಷ್ಟದ ಸ್ಟೋರಿ.

ಸೂಳೆಕೆರೆ - ಏಷ್ಯಾದ 2ನೇ ಅತಿ ದೊಡ್ಡ ಕೆರೆ ಇನ್ನು 20 ದಿನದಲ್ಲಿ ಖಾಲಿ ಖಾಲಿ: ಆತಂಕ, ಭಯದಲ್ಲಿ ಜನ
ಏಷ್ಯಾದ 2ನೇ ಅತಿ ದೊಡ್ಡ ಕೆರೆ ಇನ್ನು 20 ದಿನದಲ್ಲಿ ಖಾಲಿ ಖಾಲಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಸಾಧು ಶ್ರೀನಾಥ್​|

Updated on: Mar 01, 2024 | 10:53 AM

Share

ಹತ್ತಾರು ಕಡೆ ಕುಡಿಯುವ ನೀರಿಗೆ (Drinking Water) ಆಸರೆ ಆಗಿದ್ದ ಸೂಳೆಕೆರೆ ಈಗ ಸಂಕಷ್ಟದಲ್ಲಿದೆ. ಕಾರಣ ಇನ್ನು ಕೇವಲ 20 ದಿನಗಳಿಗೆ ಆಗುವಷ್ಟು ನೀರು ಮಾತ್ರ ಕೆರೆಯಲ್ಲಿದೆ. ಇದು ಆಶ್ಚರ್ಯವಾದ್ರು ನಂಬಲೆ ಬೇಕು. ಏಷ್ಯಾದ ಅತಿ ದೊಡ್ಡ ಎರಡನೇ ಕೆರೆ (Sulekere lake) ಎಂಬ ಖ್ಯಾತಿ ಇರುವ ಕೆರೆ ಖಾಲಿ ಆಗುತ್ತಿರುವುದು ಆದ್ರೆ ಭಯ ಆತಂಕವನ್ನುಂಟು ಮಾಡುತ್ತಿದೆ. ಇಲ್ಲಿದೆ ನೋಡಿ ಸೂಳೆಕೆರೆ ಸಂಕಷ್ಟದ ಸ್ಟೋರಿ.

ಈ ಸೂಳೆಕೆರೆ ಮೂಲಕ ಚನ್ನಗಿರಿ, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ಮತ್ತು ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೆ ಬಳಕೆಯಾಗುತ್ತಿದ್ದು ಮುಂದಿನ 20 ದಿನಗಳಿಗೆ ಆಗುವಷ್ಟು ಮಾತ್ರ ನೀರಿನ ಸಂಗ್ರಹವಿದ್ದು ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳನ್ನು ತೆರವು ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ ಮತ್ತು ಗ್ರಾಮೀಣ ಕುಡಿಯುವ ನೀರು ವಿಭಾಗದ ಇಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದಕ್ಕಾಗಿಯೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪತ್ತು ನಿರ್ವಹಣೆ ಕುರಿತಂತೆ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಂಜಿನಿಯರ್, ಪಶುಸಂಗೋಪನಾ ಇಲಾಖೆ, ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸೂಳೆಕೆರೆಯಿಂದ ದಾವಣಗೆರೆ ಮತ್ತು ಚಿತ್ರದುರ್ಗ ಎರಡು ಜಿಲ್ಲೆಗಳ ಪ್ರಮುಖ ಪಟ್ಟಣ, ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆರೆಗೆ ಅನಧಿಕೃತವಾಗಿ ಪಂಪ್‍ಸೆಟ್ ಅಳವಡಿಸಿಕೊಂಡು ಅಕ್ರಮವಾಗಿ ನೀರೆತ್ತಲಾಗುತ್ತಿದೆ. ಇದರಿಂದ ನೀರಿನ ಸಂಗ್ರಹ ತುಂಬಾ ಇಳಿಕೆಯಾಗಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗಲಿದೆ.

Also Read: ಟಿವಿ9 ವರದಿ ಫಲಶೃತಿ -ತಾಂಡಾ ನಿವಾಸಿಗಳ ಮನೆಗೆ ಬೇಕಾದಷ್ಟು ನೀರು ಸರಬರಾಜು ಮಾಡುತ್ತಿರುವ ಕೊಪ್ಪಳ ಅಧಿಕಾರಿಗಳು!

ಅಕ್ರಮ ತಡೆಯಲು ಮೊದಲು ಮಾಡಬೇಕಾಗಿದ್ದು, ಅಕ್ರಮ ಪಂಪ್ ಸೆಟ್ ಗಳಿಗೆ ಸಂಪರ್ಕ ಸ್ಥಗಿತಗೊಳಿಸುವುದು. ಬೆಸ್ಕಾಂನಿಂದ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿಕೊಟ್ಟಿದ್ದರಿಂದ ರೈತರು ಅನಧಿಕೃತವಾಗಿ ಕೆರೆಯಲ್ಲಿನ ನೀರನ್ನು ಬಳಕೆ ಮಾಡುತ್ತಿದ್ದಾರೆ. ಅನಧಿಕೃತವಾಗಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳನ್ನು ತೆರವು ಮಾಡಲು ಮತ್ತು ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲು ಬೆಸ್ಕಾಂ ಇಂಜಿನಿಯರ್‍ಗೆ ಸೂಚನೆ ನೀಡಿದರು. ಶಾಂತಿಸಾಗರದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಕಾಲುವೆ ಮೂಲಕ ನೀರು ಶೇಖರಣೆಗೆ ಕ್ರಮವಹಿಸಲಾಗುತ್ತದೆ.

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ: ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾದಲ್ಲಿ ಖಾಸಗಿ ಕೊಳವೆಬಾವಿ ಸಿಗದಿದ್ದಲ್ಲಿ ತಕ್ಷಣವೇ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡಬೇಕು. ದೂರದ ಆಧಾರದ ಮೇಲೆ ಈಗಾಗಲೇ ಪ್ರತಿ ಟ್ಯಾಂಕರ್‍ಗೆ ರೂ. 500, 600, ಹಾಗೂ ರೂ. 900 ರವರೆಗೆ ದರ ನಿಗದಿ ಮಾಡಲಾಗಿದೆ. ಟೆಂಡರ್ ಕರೆಯಲಾಗಿಲ್ಲ ಎಂದು ತಾಂತ್ರಿಕ ನೆಪವೊಡ್ಡಿ ಜನರಿಗೆ ನೀರು ಕೊಡದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Also Read: 30 ಅಡಿ ಆಳದ ಬಾವಿಗೆ ಮೆಟ್ಟಿಲುಗಳೇ ಇಲ್ಲ! ಜೀವ ಭಯದಲ್ಲೇ ಜೀವ ಜಲ ತುಂಬಿಸಿಕೊಳ್ಳುವ ಅನಿವಾರ್ಯತೆ ಈ ಮಹಿಳೆಯರದ್ದು

ಕೆಲ ಕಡೆ ಖಾಸಗಿ ಕೊಳವೆಬಾವಿಗಳಿಂದ ನೀರು ಪೂರೈಕೆ ಕ್ರಮ: ಜಿಲ್ಲೆಯಲ್ಲಿ 14 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 22 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅದರಲ್ಲಿ ಚನ್ನಗಿರಿ 2 ಗ್ರಾಮ ಪಂಚಾಯಿತಿಯಲ್ಲಿ 7 ಕೊಳವೆಬಾವಿ – 3 ಗ್ರಾಮಗಳು, ದಾವಣಗೆರೆ 2 ಗ್ರಾ.ಪಂ.ಗಳಲ್ಲಿ 3 ಕೊಳವೆಬಾವಿ – 3 ಗ್ರಾಮ, ಹರಿಹರ 3 ಗ್ರಾ.ಪಂ.ಗಳಲ್ಲಿ 4 ಕೊಳವೆಬಾವಿ – 4 ಗಾಮಗಳು, ಹೊನ್ನಾಳಿ 4 ಗ್ರಾ.ಪಂ. 4 ಕೊಳವೆಬಾವಿ – 3 ಗ್ರಾಮಗಳು, ಜಗಳೂರು 3 ಗ್ರಾ.ಪಂ. ವ್ಯಾಪ್ತಿಯಲ್ಲಿ 4 ಖಾಸಗಿ ಕೊಳವೆಬಾವಿಗಳ ಮೂಲಕ 4 ಗ್ರಾಮಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎನೇ ಆಗಲಿ ಎಂದಿಗೂ ಬತ್ತಿಹೋಗದ ಸೂಳೆಕೆರೆ ಇನ್ನು 20 ದಿನಗಳಾದ ಮೇಲೆ ಒಣಗುತ್ತದೆ ಅಂದ್ರೆ ನಿಜಕ್ಕೂ ಬೇಸರದ ವಿಚಾರವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ