ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ, ಜನವರಿ 05: ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಗ್ರಾಮಕ್ಕೆ ಸೂಳೆಕೆರೆಯಿಂದ (Sulekere) ಕುಡಿಯುವ ನೀರು ಬಿಡಲಾಗುತ್ತಿದೆ. ಈ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸಂತೆಬೆನ್ನೂರು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣಕ್ಕೆ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ.
ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ
ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ, ಗೃಹಬಳಕೆಗೆ ಮಾತ್ರ ಬಳಸಿ ಎಂದು 2023ರ ಅಕ್ಟೋಬರ್ 23 ರಂದು ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಮನವಿ ಮಾಡಿದ್ದರು.
ಕಲುಷಿತ ನೀರು ಸೇವಿಸಿ ಸಾವು
2023 ಅಗಸ್ಟ್ನಲ್ಲಿ ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಸಾವಿಗೀಡಾಗಿದ್ದು, 200 ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ದುರಂತ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಅವಘಡಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಏಷ್ಯಾದ ಎರಡನೇ ಅತಿ ದೊಡ್ಡ ಸೂಳೆಕೆರೆ ನೀರು ಕಾರಣವಾಯಿತಾ ಎಂಬ ಅನುಮಾನ ವ್ಯಕ್ತವಾಗಿತ್ತು.
ಇದನ್ನೂ ಓದಿ: ಕವಾಡಿಗರಹಟ್ಟಿಯ 5 ಜನರ ಸಾವಿಗೆ ಸೂಳೆಕೆರೆಯ ಪಂಪ್ ಹೌಸ್ನ ಕೆಟ್ಟುನಿಂತ ಫಿಲ್ಟರ್ಗಳು ಕಾರಣ ?
ಹೀಗಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವೈದ್ಯರು ನೀರನ್ನು ಪರೀಕ್ಷಿಸಿ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬರಗಾಲ ಆವರಿಸಿದ್ದರಿಂದ ನೀರಿಗೆ ಹಾಹಾಕಾರ ಶರುವಾಗಿದೆ. ಈ ಸಂಬಂಧ ಪುರಸಭೆ ಮತ್ತೆ ನೀರು ಪೂರೈಕೆ ಮಾಡುತ್ತಿದೆ. ಆದರೆ ಈಗ ಈ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ