AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ

Davanagere News: ಇಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ದಶಕಗಳಿಂದ ಜನರ ಒತ್ತಾಯ ಇದೆ. ಆದರೆ ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತವಾಗಿದೆ.

ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ
ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ
TV9 Web
| Updated By: ganapathi bhat|

Updated on: Oct 24, 2021 | 3:14 PM

Share

ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಸಂಪೂರ್ಣ ಜಲಾವೃತವಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕೆರೆಗೆ ಕೋಡಿ ಬಿದ್ದ ಪರಿಣಾಮ ಹಳ್ಳ ಸಂಪೂರ್ಣ ಮುಳುಗಡೆಯಾಗಿದೆ. ದಾವಣಗೆರೆ, ಚನ್ನಗಿರಿಗೆ ಹೋಗುವುದಕ್ಕೆ ಜನರು ಹರಸಾಹಸ ಪಡುವಂತಾಗಿದೆ. ಇಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ದಶಕಗಳಿಂದ ಜನರ ಒತ್ತಾಯ ಇದೆ. ಆದರೆ ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೂಳೆಗೆರೆ ಕೋಡಿ ಬಿದ್ದ ಹಿನ್ನೆಲೆ ಹಳ್ಳಗಳು ತುಂಬಿ ಹರಿಯುತ್ತಿದೆ. ಚಿರಡೋಣಿ -ದೊಡ್ಡಘಟ್ಟ ಗ್ರಾಮಗಳ‌ ನಡುವೆ ಸಂಪರ್ಕ ಕಡಿತವಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯ ಹಿನ್ನೆಲೆ ಐತಿಹಾಸಿಕ ಏಷ್ಯಾದ ಎರಡನೇ ಅತಿ ದೊಡ್ಡದಾದ ಸೂಳೆಕೆರೆ ಭರ್ತಿ ಆಗಿದೆ. ಈ ಹಿನ್ನೆಲೆ ಬ್ಯಾರಿಕೇಡ್ ಹಾಕಿ ಪೊಲೀಸರು ರಸ್ತೆ ಸಂಚಾರ ಸ್ಥಗಿತ ಗೊಳಿಸಿದ್ದಾರೆ.

ಚಿಕ್ಕಬಳ್ಳಾಪುರ: ರಂಗಧಾಮ ಕೆರೆ ತುಂಬಿ ಕೋಡಿ ಹರಿವು ಚಿಕ್ಕಬಳ್ಳಾಪುರ ನಗರದ ರಂಗಧಾಮ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕೆರೆ ಕೋಡಿ ನೀರು ಹರಿದು ವಸತಿ ಬಡಾವಣೆ ಹಾಗೂ ರಾಷ್ಟ್ರೀಯ ಹೆದ್ದಾರಿ 234 ಜಲಾವೃತ ಆಗಿದೆ. ಕೆರೆಯ ಕೋಡಿ ನೀರು ನೋಡಲು ಜನ ಮುಗಿಬಿದ್ದಿದ್ದಾರೆ. ಕಳೆದ 30 ವರ್ಷಗಳಿಂದ ಇದೇ ಪ್ರಥಮ ಬಾರಿಗೆ ಕೆರೆ ಕೋಡಿ ಹರಿಯುತ್ತಿದೆ. ಕೆರೆಯ ಕಾಲುವೆ ಒತ್ತುವರಿ ಹಿನ್ನಲೆ ಬಡಾವಣೆಗಳಿಗೆ ನೀರು ನುಗ್ಗಿದೆ. ಡಿವೈನ್ ಸಿಟಿ ಬಡಾವಣೆಗೆ ರಸ್ತೆ ಸಂಪರ್ಕ ಸ್ಥಗಿತವಾಗಿದೆ. ನಗರಕ್ಕೆ ಬರಲು ಬಡಾವಣೆ ನಿವಾಸಿಗಳು ಪರದಾಡಿದ್ದಾರೆ.

ಇದನ್ನೂ ಓದಿ: ಉಡುಪಿ: ಅಕಾಲಿಕ ಮಳೆಗೆ ಕಂಗಾಲಾದ ಭತ್ತ ಬೆಳೆಗಾರರು; ಹೆಚ್ಚುವರಿ ಕೃಷಿಗೆ ಹಾನಿ

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ: ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಕೆರೆಗಳು ಭರ್ತಿ, ರಾಷ್ಟ್ರೀಯ ಹೆದ್ದಾರಿ 234ರ ರಸ್ತೆ ಮೇಲೆ ಹರಿಯುತ್ತಿದೆ ನೀರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ