ದಾವಣಗೆರೆ: ಕಲುಷಿತ ನೀರು ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಳ, ಜೋಳದಾಳ್ನಲ್ಲೇ ಬೀಡು ಬಿಟ್ಟ ಆರೋಗ್ಯ ಸಿಬ್ಬಂದಿ
ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೋಳದಾಳ್ನಲ್ಲೇ ಬೀಡು ಬಿಟ್ಟಿದ್ದಾರೆ. ವಾಂತಿ ಭೇದಿ ಹಿನ್ನೆಲೆ 52 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 15 ಜನ ಗುಣಮುಖರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.
ದಾವಣಗೆರೆ, ಆಗಸ್ಟ್.31: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಮತ್ತೆ ವಾಂತಿ ಭೇದಿಯಿಂದ ವಿವಿಧ ಆಸ್ಪತ್ರೆಗಳಿಗೆ ಜನ ದಾಖಲಾಗಿದ್ದಾರೆ. 52 ಮಂದಿ ಚನ್ನಗಿರಿ ಆಸ್ಪತ್ರೆ, ಭದ್ರಾವತಿ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೋಳದಾಳ್ನಲ್ಲೇ ಬೀಡು ಬಿಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಇಲ್ಲ, ಈಗಾಗಲೇ 15 ಜನ ಗುಣಮುಖರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಕಾಲರ ನೆಗೆಟಿವ್ ಬಂದಿದೆ. ಗ್ರಾಮದಲ್ಲಿ ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಸಿಬ್ಬಂದಿ ನೇಮಕ ಮಾಡಿ ಮುಂಜಾಗ್ರತ ಕ್ರಮವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮದ ಪ್ರತಿಯೊಬ್ಬರಿಗೂ ತಪಾಸಣೆ ಮಾಡಲಾಗುತ್ತಿದ್ದಿ ಕಾಯಿಸಿ ಆರಿಸಿದ ನೀರು ಕುಡಿಯುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ! ಒಳ್ಳೆಯವರಂತೆ ಪರಿಚಯವಾಗಿ ಮಗು ಕಿಡ್ನಾಪ್
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮಕ್ಕೆ ಚನ್ನಗಿರಿ ಇಓ ಬಿ.ಕೆ.ಉತ್ತಮ್, ಕುಡಿಯುವ ನೀರು ವಿಭಾಗದ ಎಇಇ ಲೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಮಾದರಿ ಸಂಗ್ರಹ ಮಾಡಲಾಗಿದೆ. ಗ್ರಾಮದಲ್ಲಿ ವೈದ್ಯರ ತಂಡ ಠಿಕಾಣಿ ಹೂಡಿದೆ. ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೊದಲು ನಾಲ್ಕು ಜನರರಲ್ಲಿ ವಾಂತಿ ಬೇಧಿ ಕಂಡು ಬಂದಿತ್ತು. ಬಳಿಕ 25 ಜನ, ಇದೀಗ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ