ಈ ವರ್ಷ ದಾವಣಗೆರೆ ಜಿಲ್ಲೆಯಲ್ಲಿ ಮೂವರು ದಲಿತರ ಕೊಲೆ, 8 ಮಹಿಳೆಯರ ಮೇಲೆ ಅತ್ಯಾಚಾರ

ಒಟ್ಟು 122 ಸಂತ್ರಸ್ತರಿಗೆ ಪ್ರಕರಣ ದಾಖಲಾದ ಬಳಿಕ 38 ಲಕ್ಷ ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆ ಬಳಿಕ 79 ಲಕ್ಷ ರೂಪಾಯಿ ಸೇರಿ ಒಟ್ಟು 1.18 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ಮಾಹಿತಿ ನೀಡಿದರು.

ಈ ವರ್ಷ ದಾವಣಗೆರೆ ಜಿಲ್ಲೆಯಲ್ಲಿ ಮೂವರು ದಲಿತರ ಕೊಲೆ, 8 ಮಹಿಳೆಯರ ಮೇಲೆ ಅತ್ಯಾಚಾರ
ಕೊಲೆಯಾದ ದಲಿತ ಯುವಕ ಶಿವರಾಜ್
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು

Updated on: Oct 04, 2024 | 12:28 PM

ದಾವಣಗೆರೆ, ಅ.04: ಇತ್ತೀಚೆಗೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ಶಿವರಾಜ್ ಎಂಬ ಯುವಕನನ್ನ ಪ್ರಭಾವಿಗಳು ಚಾಕುವಿನಿಂದ ಇರಿದು ಕೊಲೆ (Murder) ಮಾಡಿದ್ದರು. ಅಕ್ರಮ ಮರಳು ದಂಧೆ ಪ್ರಶ್ನೆ ಮಾಡಿದ್ದಕ್ಕೆ‌ ಮನೆಗೆ ನುಗ್ಗಿ ರಸ್ತೆಗೆ ತಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಇದರ ಜೊತೆಗೆ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೂರು ದಲಿತರ ‌‌ಕೊಲೆಯಾಗಿದೆ. ಎಂಟು ಜನ ಎಸ್ಸಿ ಎಸ್ಟಿ ಮಹಿಳೆಯರು ಮೇಲೆ ಅತ್ಯಾಚಾರ ನಡೆದ ಪ್ರಕರಣಗಳು ದಾಖಲಾಗಿವೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ಜಿಎಂ ಗಂಗಾಧರಸ್ವಾಮಿ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾಗೃತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ಮಾಹಿತಿ ನೀಡಿದರು. ಈ ವರ್ಷ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಯಡಿ ಒಟ್ಟು 60 ಪ್ರಕರಣಗಳು ದಾಖಲಾಗಿವೆ. ಮೂರು ಕೊಲೆ, 8 ಅತ್ಯಾಚಾರ ಹಾಗೂ 49 ಇತರೆ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 28 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಇದೇ ಸಪ್ಟೆಂಬರ್ ಅಂತ್ಯಕ್ಕೆ ನ್ಯಾಯಾಲಯದಲ್ಲಿ 143 ಎಸ್ಸಿ ಎಸ್ಟಿ ಪ್ರಕರಣಗಳು ಬಾಕಿ ಇವೆ. ಒಟ್ಟು 122 ಸಂತ್ರಸ್ತರಿಗೆ ಪ್ರಕರಣ ದಾಖಲಾದ ಬಳಿಕ 38 ಲಕ್ಷ ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆ ಬಳಿಕ 79 ಲಕ್ಷ ರೂಪಾಯಿ ಸೇರಿ ಒಟ್ಟು 1.18 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕೊಲೆಯಾದ ಮೂರು ದಲಿತರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ಅವರು ಮಾಹಿತಿ‌ ನೀಡಿದರು.

ಇದನ್ನೂ ಓದಿ: ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ

ದಾವಣಗೆರೆ ಕೋರ್ಟ್​ನಲ್ಲಿ ಎಸ್ಸಿ ಎಸ್ಟಿಗೆ ಸಂಬಂಧಿಸಿದ ಹತ್ತು ಪ್ರಕರಣಗಳ ವಿಲೇವಾರಿ ಆಗಿವೆ. ಸೆಪ್ಟೆಂಬರ್ ಅಂತ್ಯಕ್ಕೆ 143 ಪ್ರಕರಣಗಳು ಬಾಕಿ ಇವೆ. 2018ರ 02 ಪ್ರಕರಣಗಳು, 2019-03, 2020-20, 2021-14, 2022-32, 2023-49 ಹಾಗೂ 2024ರ 34 ಪ್ರಕರಣಗಳು ಬಾಕಿ ಇವೆ. 1.18 ಕೋಟಿ ರೂಪಾಯಿ ಒಟ್ಟು ಪರಿಹಾರದಲ್ಲಿ 66 ಜನ ಎಸ್ಸಿ, 58 ಜನ ಎಸ್ಟಿ ಒಟ್ಟು 122 ಜನಕ್ಕೆ ಪರಿಹಾರ ನೀಡಲಾಗಿದೆ.

ಕೊಲೆಯಾದ ದಲಿತರು ಜಗಳೂರು ತಾಲೂಕಿನ ಗಾಂಧಿನಗರದ ಢಾಕ್ಯಾ ನಾಯ್ಕ, ಹೊನ್ನಾಳಿಯ ಮಂಜಪ್ಪ ಹಾಗೂ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯ ಶಿವರಾಜ್. ಈ ಮೂರು ಜನರ ಸಂತ್ರಸ್ತರ ಕುಟುಂಬ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುತ್ತಿದೆ. ಈಗಾಗಲೇ ಒಂದು ಕುಟುಂಬದ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇಷ್ಟರಲ್ಲಿ ಇನ್ನೆರಡು ಕುಟುಂಬಗಳ ಪ್ರಸ್ತಾವ ಕಳುಹಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ