ಪ್ರತ್ಯೇಕ ಅಪಘಾತ: 3 ವರ್ಷದ ಮಗು ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ತಂದೆ ಮತ್ತು 3 ವರ್ಷದ ಮಗು ಮೃತಪಟ್ಟಿದ್ದು, ಪತ್ನಿ ಸೇರಿ ಮತ್ತಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸನಗರದ ರಿಪ್ಪನ್‌ಪೇಟೆ ಸಮೀಪ ಪೇಪರ್ ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದರೆ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್​ಗೆ ಗುದ್ದಿರುವ ಘಟನೆ ಬೆಂಗಳೂರಿನ ರಾಜಾರಾಮ್​ ಮೋಹನ್ ರಾಯ್ ರಸ್ತೆಯಲ್ಲಿ ನಡೆದಿದೆ.

ಪ್ರತ್ಯೇಕ ಅಪಘಾತ: 3 ವರ್ಷದ ಮಗು ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ
ಮೃತ ತಂದೆ ಮತ್ತು ಮಗಳು
Edited By:

Updated on: Nov 28, 2026 | 10:18 AM

ದಾವಣಗೆರೆ, ನವೆಂಬರ್​​ 28: ಬೈಕ್​​ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೀಟೂರ್ ಕ್ರಾಸ್ ಬಳಿ ನಡೆದಿದೆ. ಮನೋಜ್​(35), 3 ವರ್ಷ ಧೃತಿ ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಮನೋಜ್​​ ಪತ್ನಿ ನಂದಿನಿ, ಮತ್ತಿಬ್ಬರು ಮಕ್ಕಳಿಗೆ ಗಾಯಗಳಾಗವೆ. ಮೂವರನ್ನೂ ಉಡುಪಿಯ ಮಣಿಪಾಲ್​​​​ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರು ಹರಿಹರ ನಗರದ ಆಶ್ರಯ ಕಾಲೋನಿ ನಿವಾಸಿಗಳು ಎಂದು ತಿಳಿದುಬಂದಿದೆ. ನಂದಿನಿ ಅವರ ತವರಿನಲ್ಲಿನ ಹಬ್ಬ ಮುಗಿಸಿ ಕುಟುಂಬ ಕಲ್ಪನಹಳ್ಳಿಯಿಂದ ಹರಿಹರಕ್ಕೆ ಬೈಕ್​​ನಲ್ಲಿ ವಾಪಸ್​ ಆಗುತ್ತಿತ್ತು. ಮೂವರು ಮಕ್ಕಳು ಸಹಿತ ದಂಪತಿ ಬೈಕ್​​ನಲ್ಲಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೇಪರ್ ಸಾಗಿಸುತ್ತಿದ್ದ ಕಾರು ಪಲ್ಟಿ: ಓರ್ವ ಸಾವು

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಜಂಬಳ್ಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪೇಪರ್ ಸಾಗಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಶಿವಮೊಗ್ಗ ಮೂಲದ ಶಿವಕುಮಾರ್ (45) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕಾರಲ್ಲಿದ್ದ ಮತ್ತೋರ್ವ ವ್ಯಕ್ತಿ ​ತೀರ್ಥಹಳ್ಳಿ ಮೂಲದ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು, ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ದಿನಪತ್ರಿಕೆಗಳನ್ನು ತೀರ್ಥಹಳ್ಳಿಗೆ ತಲುಪಿಸಿ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ​ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Loading...

ಇದನ್ನೂ ಓದಿ: ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ದಾಖಲು

ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್​ಗೆ ಗುದ್ದಿರುವ ಘಟನೆ ಬೆಂಗಳೂರಿನ ರಾಜಾರಾಮ್​ ಮೋಹನ್ ರಾಯ್ ರಸ್ತೆಯಲ್ಲಿ ನಡೆದಿದೆ. ಬೆಳಗಿನಜಾವ 5.10ರ ಸುಮಾರಿಗೆ ಅಪಘಾತ ನಡೆದಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಕಾರ್ಪೊರೇಷನ್ ಸಂಪರ್ಕಿಸುವ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್​ಜಾಮ್ ಉಂಟಾಗಿದ್ದು, ಕ್ರೇನ್ ಮೂಲಕ ಸಂಚಾರ ಪೊಲೀಸರು ಖಾಸಗಿ ಬಸ್​ ತೆರವುಗೊಳಿಸುವ ಕೆಲಸ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us