ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ: ಗ್ರಾಮದಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಹಾಗೂ ದಿಗ್ಗೇನಹಳ್ಳಿ ಗ್ರಾಮಗಳ ಬಳಿ ಬಟ್ಟೆ ತೊಳೆಯಲು ಹೋಗಿದ್ದ ಮೂವರ ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಮೃತದೇಹಗಳನ್ನು ಹೊರತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ. ಸ್ಥಳಕ್ಕೆ ತಹಶೀಲ್ದಾರ್ ಸೇರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ದಾವಣಗೆರೆ, ಮಾರ್ಚ್ 17: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು (Women’s) ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ. ದೀಪಾ(28), ದಿವ್ಯಾ(೨6) ಹಾಗೂ ಚಂದನಾ(19) ಮೃತ ಮಹಿಳೆಯರು. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚನ್ನಗಿರಿ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ತಾಹಶೀಲ್ದಾರ್ ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಹೊಯ್ಸಳ ನಗರ ಬೈಪಾಸ್ ಬಳಿ ನಡೆದಿದೆ. ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಧಾರವಾಡದಿಂದ ಹುಬ್ಬಳ್ಳಿ ಕಡೆ ಬೈಕ್ನಲ್ಲಿ ವ್ಯಕ್ತಿ ಹೊರಟಿದ್ದು, ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ವಿಜಯಪುರದಲ್ಲೊಂದು ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಲಾರಿ ನಿಲ್ಲಿಸದೇ ಚಾಲಕ ಪರಾರಿ ಆಗಿದ್ದಾನೆ. ಬಳಿಕ ಬೆನ್ನತ್ತಿ ಲಾರಿಯನ್ನು ಸಂಚಾರ ಠಾಣೆ ಪೊಲೀಸರು ಧಾರವಾಡ ತಾಲೂಕಿನ ತೇಗೂರ ಬಳಿ ಹಿಡಿದಿದ್ದಾರೆ.
ವಾಕಿಂಗ್ ಹೋಗುತ್ತಿದ್ದಾಗ ಗುದ್ದಿದ ಬೈಕ್: ಯುವಕ ಸಾವು
ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿರುವಂತಹ ಘಟನೆ ಬೀದರ್ನ ಔರಾದ್ ತಾಲೂಕಿನ ಮಸ್ಕಲ್ ಬಳಿ ನಡೆದಿದೆ. ಮಸ್ಕಲ್ ಗ್ರಾಮದ ನವನಾಥ್ ರಾಮಣ್ಣ (32) ಮೃತ ಯುವಕ.
ಇದನ್ನೂ ಓದಿ: ಯಾದಗಿರಿಯಲ್ಲಿ ಡಬಲ್ ಮರ್ಡರ್: 2 ಪ್ರತ್ಯೇಕ ಗ್ಯಾಂಗ್ನಿಂದ ದಲಿತ ಮುಖಂಡ, ಸಹಚರನ ಕೊಲೆ
ವೇಗವಾಗಿ ಬಂದ ಬೈಕ್, ಯುವಕನಿಗೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಪರಾರಿ ಆಗಿದ್ದಾನೆ. ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:19 pm, Mon, 17 March 25