ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ

ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಗಾಯಗೊಂಡ ಬಾಲಕನಿಗೆ ಚಿಕಿತ್ಸೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ
ಗಾಯಗೊಂಡ ಬಾಲಕ
Follow us
TV9 Web
| Updated By: preethi shettigar

Updated on:Oct 17, 2021 | 1:03 PM

ದಾವಣಗೆರೆ: ನಿನ್ನೆ (ಅಕ್ಟೋಬರ್ 16) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಶಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾರೆಟ್ ಕ್ಯಾಪ್​ನಲ್ಲಿನ ಪಿನ್ನೊಂದು ಬಾಲಕ ನಿತೀನ್ ಎಂಬಾತನಿಗೆ ತಾಗಿದ್ದು, ಗಾಯವಾಗಿ ರಕ್ತ ಸುರಿದಿತ್ತು. ಈ ಘಟನೆಯಲ್ಲಿ ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ಕೊಡಿಸಲಾಗುವುದು. ಜೊತೆಗೆ ಘಟನೆಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಬಂದೋಬಸ್ತ ವೇಳೆ ಬಾಲಕನಿಗೆ ಗಾಯವಾಗಿದ್ದು, ಪೊಲೀಸರು ಬಾಲಕನ ಮೇಲೆ ಯಾವುದೇ ಹಲ್ಲೆ ಮಾಡಿರುವುದಿಲ್ಲ. ಆದರೆ ಕೆಲವೊಂದು ಮಾಧ್ಯಮಗಳಲ್ಲಿ ಸದರಿ ಘಟನೆಯನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸಿರುತ್ತಾರೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿಯಲ್ಲಿ ಯಾವುದೇ ಘಟನೆ ಸಂಭಾವಿಸಿರುವುದಿಲ್ಲ. ಸದರಿ ಘಟನೆ ಕೇವಲ ಆಕಸ್ಮಿಕವಾಗಿ ಘಟಿಸಿರುವುದೇ ವಿನಃ ಬೇರೆ ಯಾವುದೇ ದುರುದ್ದೇಶದಿಂದ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್​ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ಲಕ್ಷಣ! ವರದಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

ಆಸ್ಪತ್ರೆ ಕಾಂಪೌಂಡ್ ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಹಲ್ಲೆ; ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ

Published On - 12:28 pm, Sun, 17 October 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ