ದಾವಣಗೆರೆ: ಯಾವುದೇ ಕ್ಷಣದಲ್ಲಿ ತುಂಗಭದ್ರಾ ನದಿಗೆ ನೀರು ಬಿಡಬಹುದು; ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವುದು ಸೂಕ್ತ
ಮಳೆ ಕೂಡಾ ಬರುತ್ತಿದೆ. ಡ್ಯಾಂಗೆ ಒಳಹರಿವು ಹೆಚ್ಚಾಗಿದೆ. ಈ ಕಾರಣದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗುವುದು. ನದಿ ಪಾತ್ರದಲ್ಲಿ ಸಾರ್ವಜನಿಕರು ಸುತ್ತಾಡುವುದು ಹಾಗೂ ಜಾನುವಾರು ಮೇಯಿಸುವುದನ್ನ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದಾವಣಗೆರೆ: ಯಾವುದೇ ಕ್ಷಣದಲ್ಲಿ ತುಂಗಭದ್ರಾ ನದಿಗೆ ನೀರು ಬಿಡಬಹುದು. ಹಾಗಾಗಿ, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಹೊನ್ನಾಳಿ ಹಾಗೂ ಹರಿಹರ ತಾಲೂಕಿನ ಜನರಿಗೆ ಸೂಚನೆ ನೀಡಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಚಂದ್ರಹಾಸ್ ಈ ಬಗ್ಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಭದ್ರಾ ಡ್ಯಾಂ ನಿಂದ ಯಾವುದೇ ಕ್ಷಣದಲ್ಲಿ ತುಂಗಭದ್ರಾ ನದಿಗೆ ನೀರು ಬಿಡಬಹುದು. ನದಿ ಪಾತ್ರದ ಜನ ಸುರಕ್ಷಿತ ಸ್ಥಳಕ್ಕೆ ಹೋಗುವುದು ಸೂಕ್ತ. ಭದ್ರಾ ಡ್ಯಾಂನ ನೀರಿನ ಮಟ್ಟ 180 ರಷ್ಟಿದೆ. ಡ್ಯಾಂನ ಗರಿಷ್ಠ ಮಟ್ಟ 186. ಸದ್ಯ 18 ರಿಂದ 20 ಸಾವಿರ ಕ್ಯೂಸೆಕ್ಸ್ ನೀರು ಒಳಹರಿವು ಆಗುತ್ತಿದೆ. ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ತುಂಗಭದ್ರ ನದಿಗೆ ನೀರು ಬಿಡಬಹುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಂ. ಚಂದ್ರಹಾಸ್ ಮಾಹಿತಿ ನೀಡಿದ್ದಾರೆ.
ನದಿ ಪಾತ್ರದಲ್ಲಿ ಬರುವ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ ಜನ ಎಚ್ಚರಿಕೆಯಿಂದ ಇರಬೇಕು. ಮಳೆ ಕೂಡಾ ಬರುತ್ತಿದೆ. ಡ್ಯಾಂಗೆ ಒಳಹರಿವು ಹೆಚ್ಚಾಗಿದೆ. ಈ ಕಾರಣದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗುವುದು. ನದಿ ಪಾತ್ರದಲ್ಲಿ ಸಾರ್ವಜನಿಕರು ಸುತ್ತಾಡುವುದು ಹಾಗೂ ಜಾನುವಾರು ಮೇಯಿಸುವುದನ್ನ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊಪ್ಪಳ: ಕಂಪ್ಲಿ-ಗಂಗಾವತಿ ಬ್ರಿಡ್ಜ್ ಮುಳುಗಡೆ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ, ಕಂಪ್ಲಿ- ಗಂಗಾವತಿ ಸೇತುವೆ ಮುಳುಗಡೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇರುವ ಸೇತುವೆ ಮುಳುಗಡೆ ಆಗಿದ್ದು, ಸೇತುವೆ ಮೇಲೆ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಇದನ್ನೂ ಓದಿ: Haveri: ವರದಾ ನದಿ ಪ್ರವಾಹದಿಂದ 20ಕ್ಕೂ ಹೆಚ್ಚು ಮನೆಗಳು ಜಲಾವೃತ; ಅಪಾರ ಹಾನಿ
ಹಾವೇರಿ: ಮಾವಿನಮರ ಜಲಾವೃತ; ಆಹಾರ ಸಿಗದೆ ಮರದಲ್ಲಿ ಮಂಗಗಳ ಪರದಾಟ
(Tungabhadra Dam Water Release Officers suggested to River side people to vacant place)