AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್​​ ಸದಸ್ಯ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಪಕ್ಷದ ಒತ್ತಡದಿಂದಲ್ಲ, ಬದಲಾಗಿ ಸ್ವ ಇಚ್ಛೆಯಿಂದ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಮುಖಂಡರ ಟೀಕೆಗಳಿಂದ ಬೇಸರಗೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಇವರ ರಾಜೀನಾಮೆ ಬೆನ್ನಲ್ಲೇ ಹಲವು ಆಪ್ತರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್​​ ಸದಸ್ಯ
ಸಾಮಾಜಿಕ‌ ಜಾಲತಾಣದಲ್ಲಿ ಅಬ್ದುಲ್ ಜಬ್ಬಾರ್ ಪೋಸ್ಟ್​​Image Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 12, 2026 | 1:47 PM

Share

ದಾವಣಗೆರೆ, ಏಪ್ರಿಲ್​​ 12: ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದಾವಣಗೆರೆ ಉಪ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ಹೈಕಮಾಂಡ್​​ ಕೆಲ ನಾಯಕರ ರಾಜೀನಾಮೆ ಕೇಳಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್‌ ಜಬ್ಬಾರ್, ಸ್ವ ಇಚ್ಛೆಯಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನನಗೆ ಯಾರೂ ಒತ್ತಡ ಹಾಕಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ‌ ಜಾಲತಾಣದಲ್ಲಿ ಸ್ಪಷ್ಟನೆ

ಸಾಮಾಜಿಕ‌ ಜಾಲತಾಣದಲ್ಲಿ ಅಬ್ದುಲ್ ಜಬ್ಬಾರ್​​ ಈ ಬಗ್ಗೆ ಸಂದೇಶ ಪೋಸ್ಟ್​​ ಮಾಡಿದ್ದು, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿಯುತ್ತಿದ್ದೇನೆ. ವಿಧಾ‌ನ ಪರಿಷತ್ ಸದಸ್ಯನಾಗಿ ಸಹ ಸೇವೆ ಮಾಡುತ್ತಿದ್ದೇನೆ. ಹೀಗಿರುವಾಗ ನಮ್ಮ ಪಕ್ಷದ ಮುಖಂಡರೇ ನಮ್ಮ ವಿರುದ್ಧ ಮಾತಾಡಿದ್ದು ಬೇಸರವಾಗಿದೆ. ಆ ಕಾರಣಕ್ಕೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಸ್ಲಿಂ ಸಮಾಜದ ಮುಖಂಡ ಸಚಿವ ಜಮೀರ್ ಅಹ್ಮದ್​​ಗೂ ಅವಮಾನ ಮಾಡಲಾಗಿದ್ದು, ಏಕವಚನದಲ್ಲಿ ವಾಗ್ದಾಳಿ ನಡೆಸಿರೋದು ಬೇಸರ ತಂದಿದೆ ಎಂದಿದ್ದಾರೆ. ಆ ಮೂಲಕ ಪರೋಕ್ಷವಾಗಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ನಿನ್ನೆ ರಾಜ್ಯ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಅವರ ಆಪ್ತರಾದ ಅಹಮ್ಮದ್ ಸಿರಾಜ್, ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ಸೇರಿದಂತೆ ಪ್ರಮುಖರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷರಾಗಿದ್ದರೆ, ಉಳಿದ ಮೂವರುನ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿಗಳಾಗಿದ್ದರು. ಒಟ್ಟಿಗೆ ಮಾತುಕತೆ ಬಳಿಕ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ವಿವಿಧ ಹುದ್ದೆಗಳಿಗೆ ಇವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us