ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

|

Updated on: Feb 02, 2020 | 6:14 PM

ದಾವಣಗೆರೆ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಅಶ್ವತ್ಥ್​ರೆಡ್ಡಿ ನಗರದ ಮಧು(14), ಮನು(12) ಮೃತ ದುರ್ದೈವಿಗಳು. ಭಾನುವಾರವಾದ್ದರಿಂದ ಇಂದು ಶಾಲೆಗೆ ರಜೆ ಇತ್ತು. ಹೀಗಾಗಿ ಕೃಷಿ ಹೊಂಡದಲ್ಲಿ ಈಜಲು ವಿದ್ಯಾರ್ಥಿಗಳು ತೆರಳಿದ್ದರು. ಆದ್ರೆ, ದುರಾದೃಷ್ಟವಶಾತ್ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ಮಿಶಾಮಕ ಸಿಬ್ಬಂದಿ ದೌಡಾಯಿಸಿ ವಿದ್ಯಾರ್ಥಿಗಳ ಮೃತದೇಹವನ್ನು ಮೇಲೆತ್ತಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು
Follow us on

ದಾವಣಗೆರೆ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಅಶ್ವತ್ಥ್​ರೆಡ್ಡಿ ನಗರದ ಮಧು(14), ಮನು(12) ಮೃತ ದುರ್ದೈವಿಗಳು.

ಭಾನುವಾರವಾದ್ದರಿಂದ ಇಂದು ಶಾಲೆಗೆ ರಜೆ ಇತ್ತು. ಹೀಗಾಗಿ ಕೃಷಿ ಹೊಂಡದಲ್ಲಿ ಈಜಲು ವಿದ್ಯಾರ್ಥಿಗಳು ತೆರಳಿದ್ದರು. ಆದ್ರೆ, ದುರಾದೃಷ್ಟವಶಾತ್ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ಮಿಶಾಮಕ ಸಿಬ್ಬಂದಿ ದೌಡಾಯಿಸಿ ವಿದ್ಯಾರ್ಥಿಗಳ ಮೃತದೇಹವನ್ನು ಮೇಲೆತ್ತಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.