ಜಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ. ವಿಜಯ್(21) ಹಾಗೂ ರಾಜು (19) ಸಾವನ್ನಪ್ಪಿದ ಕುರಿಗಾಹಿಗಳು.

ಜಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವು
ಮೃತ ವಿಜಯ್(21) ಹಾಗೂ ರಾಜು (19)
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 05, 2023 | 7:44 AM

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ. ಚಿಕ್ಕಮಲ್ಲನಹೊಳೆ ಗ್ರಾಮದ ವಿಜಯ್(21) ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಆಲೂರು ಗ್ರಾಮದ ನಿವಾಸಿ ರಾಜು (19) ಸಾವನ್ನಪ್ಪಿದ ಕುರಿಗಾಹಿಗಳು. ಹೌದು ಕೆರೆಗೆ ಈಜಲು ಇಳಿದಿದ್ದ ಯುವಕರು, ಈಜುತ್ತಾ ಕೆರೆಯ ಗುಂಡಿಗೆ ಸಿಲುಕಿದ್ದಾರೆ. ಬಳಿಕ ಯುವಕರ ರಕ್ಷಣೆಗೆ ಸ್ಥಳೀಯರು ಪ್ರಯತ್ನ ನಡೆಸಿದರು ಯಾವುದೇ ಪ್ರಯೋಜನ ಆಗದೇ ಯುವಕರಿಬ್ಬರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಶವವನ್ನ ಹೊರಕ್ಕೆ ತೆಗೆದಿದ್ದಾರೆ.

ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಕೊಲೆ

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್​ನಲ್ಲಿ ನಡೆದಿದೆ. ಸತೀಶ್(22) ಕೊಲೆಯಾದ ಯುವಕ. ನಿನ್ನೆ (ಏ.02)ರ ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್​ನ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ರಸ್ತೆ ಅಪಘಾತ ತಂದೆ, ಮಗಳು ಸಾವು

ರಾಮನಗರ: ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ತಂದೆ, ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸಾಬರಪಾಳ್ಯ ಬಳಿ ನಡೆದಿದೆ. ಕಲ್ಯಾ ಗ್ರಾಮದ ನಿವಾಸಿ ಯೋಗೇಶ್(47), ಪುತ್ರಿ ಹರ್ಷಿತಾ(14) ಮೃತ ದುರ್ದೈವಿಗಳು. ಯೋಗೇಶ್ ಮಗಳನ್ನು ಬೈಕ್​ನಲ್ಲಿ ಶಾಲೆಗೆ ಬಿಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ (ಏ.2) ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಪುರುಷೋತ್ತಮ (45), ವಿದ್ಯಾ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕುಟುಂಬದಲ್ಲಿ ಕಲಹ ಸಂಭವಿಸುತ್ತಿದ್ದು, ಇದಕ್ಕೆ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿತ್ತು.

ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದರು. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದರು. ಮೃತ ದೇಹಗಳನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ