ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಸಹೋದರಿಯರಿಬ್ಬರ ಶವ; ಕೊಲೆಯಾಗಿರುವ ಅನುಮಾನ
ಸಾಂಕೇತಿಕ ಚಿತ್ರ

ದಾವಣಗೆರೆ: ಮನೆಯೊಂದರಲ್ಲಿ ಸಹೋದರಿಯಬ್ಬರ ಮೃತದೋಹ (Dead Body) ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ. ನಗರದ ಕಾಟನ್​ ಮಿಲ್ ಪ್ರದೇಶದಲ್ಲಿರುವ ಮನೆಯಲ್ಲಿ ಗೌರಮ್ಮ (34 ವರ್ಷ), ರಾಧಮ್ಮ (32 ವರ್ಷ) ಎಂಬುವವರ ಶವ ಪತ್ತೆಯಾಗಿದ್ದು, ಇಬ್ಬರೂ ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಸಹೋದರಿಯರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾಗಿದ್ದು, ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೌರಮ್ಮ ಹಾಗೂ ರಾಧಮ್ಮ ಕೆಲ ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದುಬಂದಿದೆ. ಮನೆಯೊಳಗೇ ಇಬ್ಬರ ಶವ ಪತ್ತೆಯಾಗಿದ್ದು ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಅವರು ಕಾಣಿಸಿಕೊಂಡಿರಲಿಲ್ಲ. ಆದರೆ, ಇದ್ದಕ್ಕಿದ್ದಂತೆ ಮನೆಯಿಂದ ವಾಸನೆ ಬರಲಾರಂಭಿಸಿದಾಗ ಅನುಮಾನಗೊಂಡ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವು ಸಂಭವಿಸಿ ಮೂರ್ನಾಲ್ಕು ದಿನಗಳೇ ಕಳೆದಿರಬಹುದು ಎಂದು ಅಂದಾಜಿಸಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಕೊಲೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾದ ಗೌರಮ್ಮ ಮತ್ತು ರಾಧಮ್ಮ ಅವರ ಹಿನ್ನೆಲೆ ಪರಿಶೀಲಿಸಿ, ಘಟನೆಯ ಬಗ್ಗೆ ಸಹೋದರಿಯರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.

(Two sisters found dead in their House in Davanagere)
ಇದನ್ನೂ ಓದಿ:
Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ 

Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Click on your DTH Provider to Add TV9 Kannada